ಗ್ರಾನೈಟ್ಸ್ ಕೈಗಾರಿಕೆಗಳಿಗೆ ಜಿಲ್ಲಾಧಿಕಾರಿ ಭೇಟಿ, ಚರ್ಚೆ
ಕನ್ನಡಪ್ರಭ ವಾರ್ತೆ ಹಾಸನ ಮಾ. 10
ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಮತ್ತು ಕೆಐಎಡಿಬಿಯ ಅಧಿಕಾರಿಗಳು ಕೈಗಾರಿಕಾ ಬೆಳವಣಿಗೆ ಕೇಂದ್ರದಲ್ಲಿರುವ ಗ್ರಾನೈಟ್ ಕೈಗಾರಿಕೆಗಳಿಗೆ ಭೇಟಿ ನೀಡಿ, ಕೈಗಾರಿಕೆಗಳ ಸಹಾಯಧನ ಮತ್ತು ಕೈಗಾರಿಕೆಗಳಲ್ಲಿನ ಸಮಸ್ಯೆಗಳನ್ನು ಆಲಿಸಿದರು. ಇದಕ್ಕೆ ಸಂಬಂಧಿಸಿದಂತೆ ಗ್ರಾನೈಟ್ಸ್ ಉದ್ಯಮಿಗಳ ಜತೆಯಲ್ಲಿ ಚರ್ಚಿಸಿದರು. ಜಿಲ್ಲಾಧಿಕಾರಿ ಕೆ.ಪಿ.ಮೋಹನ್ರಾಜ್ ಅವರೊಂದಿಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಕೆ.ಜೆ.ಸುರೇಶ್, ಮಲ್ನಾಡ್ ಗ್ರಾನೈಟ್ಸ್ ಉದ್ಯಮಿಗಳ ಸಂಘದ ಅಧ್ಯಕ್ಷ ಕೆ.ಎಂ.ರಾಜೇಗೌಡ ಮತ್ತು ಗ್ರಾನೈಟ್ಸ್ ಉದ್ಯಮಿಗಳು ಇದ್ದರು.