17ಕ್ಕೆ ಹಿರಿಯ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಸಭೆ
ಕ.ಪ್ರ. ವಾರ್ತೆ ಹಾಸನ ಮಾ 14
ಆದಿಚುಂಚನಗಿರಿ ಹಿರಿಯ ವಿದ್ಯಾರ್ಥಿಗಳ ಒಕ್ಕೂಟದಿಂದ ಮಾ.17 ರಂದು ಜಿಲ್ಲಾ ಮಟ್ಟದ ಹಿರಿಯ ವಿದ್ಯಾರ್ಥಿಗಳ ಸಭೆ ಹಾಗೂ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಮಠದ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಂಜುಂಡಯ್ಯ ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಠದ ನಾನಾ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿರುವ ಹಳೆಯ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸುವ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಹಿರಿಯ ವಿದ್ಯಾರ್ಥಿಗಳ ಒಕ್ಕೂಟವನ್ನು ನೂತನವಾಗಿ ಸ್ಥಾಪಿಸಲಾಗಿದೆ. ರಾಜ್ಯದಾದ್ಯಂತ ಒಕ್ಕೂಟ ಸ್ಥಾಪಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಸಭೆ ನಡೆಸಲಾಗುತ್ತಿದೆ ಎಂದರು.
ಒಕ್ಕೂಟದ ಪ್ರಥಮ ಸಭೆಯನ್ನು ಮಂಡ್ಯ ಜಿಲ್ಲೆಯಲ್ಲಿ ನಡೆಸಲಾಗಿದ್ದು, 600 ಜನ ಹಳೆ ವಿದ್ಯಾರ್ಥಿಗಳನ್ನು ಸದಸ್ಯತ್ವ ನೋಂದಣಿ ಮಾಡಲಾಗಿದೆ. ಜಿಲ್ಲೆಯಲ್ಲಿ ಎರಡನೇ ಜಿಲ್ಲಾ ಮಟ್ಟದ ಸಭೆ ನಡೆಸಲಾಗುತ್ತಿದ್ದು, ಜಿಲ್ಲೆಯಿಂದ 2 ಲಕ್ಷ ಹಿರಿಯ ವಿದ್ಯಾರ್ಥಿಗಳ ಸದಸ್ಯತ್ವ ಮಾಡುವ ಉದ್ದೇಶ ಹೊಂದಲಾಗಿದೆ. ಹಾಗಾಗಿ ಆದಿಚುಂಚನಗಿರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಸಭೆಗೆ ಹಾಜರಾಗುವಂತೆ ಮನವಿ ಮಾಡಿದರು.
ಆದಿಚುಂಚನಗಿರಿ ಜಿಲ್ಲಾ ಶಾಖಾ ಮಠದ ಶ್ರೀಶಂಭುನಾಥ ಸ್ವಾಮೀಜಿ ಸಭೆಯ ಸಾನಿಧ್ಯ ಹಾಗೂ ಒಕ್ಕೂಟದ ಅಧ್ಯಕ್ಷ ಜೆ.ಎನ್.ರಾಮಕೃಷ್ಣೇಗೌಡ ಅಧ್ಯಕ್ಷತೆ ವಹಿಸುವರು ಎಂದರು.
ಸಂಘದ ವಕ್ತಾರ ಡಾ.ಪಿ.ಹರೀಶ್, ಸಂಘಟನಾ ಕಾರ್ಯದರ್ಶಿ ರಘುಗೌಡ, ಶಿಕ್ಷಕ ಕೆ.ಎಂ.ಶ್ರೀನಿವಾಸ್, ಹಿರಿಯ ವಿದ್ಯಾರ್ಥಿ ದಿಲೀಪ್, ಚಂದ್ರಶೇಖರ್ ಇದ್ದರು.