ಟ್ರ್ಯಾಕ್ಟರ್ ಡಿಕ್ಕಿ: ಪಾದಚಾರಿ ಸಾವು
ಕನ್ನಡಪ್ರಭವಾರ್ತೆ ಚನ್ನರಾಯಪಟ್ಟಣ ಮಾ. 14
ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ಪಟ್ಟಣದ ಸರ್ಕಾರಿ ರೈಸ್ ಮಿಲ್ ಹಿಂಭಾಗ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಆಲಗೊಂಡನಹಳ್ಳಿಯ ಬಾಬು (35) ಮೃತಪಟ್ಟ ದುರ್ದೈವಿ. ಅವರು ಚನ್ನರಾಯಪಟ್ಟಣ-ಮೈಸೂರು ತಿರುವು ರಸ್ತೆಯಲ್ಲಿರುವ ರೈಸ್ ಮಿಲ್
ಹಿಂಭಾಗ ಹಾದುಹೋಗಿರುವ ಸೀಳು ನಾಲುವೆಯ ಸಮೀಪ ಮಣ್ಣಿನ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಟ್ರ್ಯಾಕ್ಟರ್ ಚಾಲಕ ನಿರ್ಲಕ್ಷ್ಯತೆಯಿಂದ ವಾಹನ ಓಡಿಸಿಕೊಂಡು ಬಂದು ಡಿಕ್ಕಿ ಮಾಡಿದ್ದಾನೆ. ಇದರಿಂದ ತೀವ್ರ ಗಾಯಗೊಂಡ ಬಾಬು ಅವರನ್ನು ಚಿಕಿತ್ಸೆಗಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬಾಬು ಮೃತಪಟ್ಟಿದ್ದಾರೆ. ಈ ಬಗ್ಗೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.