ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ

Rashmi Kasaragodu
Updated On : 15 Mar 2013, 11:22 am

ಸಕಲೇಶಪುರ: ಕಾಂಗ್ರೆಸ್ ನಾಯಕರ ಇಬ್ಬಗೆ ನೀತಿಯನ್ನು  ಖಂಡಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿರುವುದಾಗಿ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಕಾರ್ ಮಲ್ಲೇಶ್ ತಿಳಿದ್ದಾರೆ. ಹಲವು ವರ್ಷಗಳಿಂದ ಕಾಂಗ್ರೆಸ್‌ನ  ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿರುವ ನನ್ನನ್ನು ನಂಬಿ ಪಕ್ಷದ ಮುಖಂಡರು ಪುರಸಭೆ ಚುನಾವಣೆಯಲ್ಲಿ ಪಟ್ಟಣದ 16 ನೇ ವಾರ್ಡ್‌ನಿಂದ  ಸ್ಪರ್ಧೆಗೆ ಅವಕಾಶ ಕಲ್ಪಿಸಿದ್ದರು. ಆದರೆ ಪಕ್ಷದ ಕೆಲವು ಮುಖಂಡರನ್ನು ನನ್ನ ವಿರುದ್ಧ ಅಪಪ್ರಚಾರ ನಡೆಸುವ ಮೂಲಕ ಕೆಲವೇ ಮತಗಳ ಅಂತರದ ಸೋಲಿಗೆ ಕಾರಣರಾದರು. ಇದರಿಂದ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ  ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement