ಹಾಸನ

ಮತದಾರರ ಪಟ್ಟಿ ಪರಿಷ್ಕರಣೆ

ಚನ್ನರಾಯಪಟ್ಟಣ: ಬರುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಸಂಬಂದ  ಮಾ.16 ರಿಂದ 22ರ ವರೆಗೆ ತಾಲೂಕಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು  ತಹಸೀಲ್ದಾರ್ ನಟರಾಜು ತಿಳಿಸಿದರು.
 ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಮತದಾರರ ಪಟ್ಟಿಯಲ್ಲಿ ಲೋಪ ಕುರಿತು ಸಾರ್ವಜನಿಕರು ದೂರು ನೀಡಿದ್ದು, ಈ ನಿಟ್ಟಿನಲ್ಲಿ ಅದನ್ನು ಸರಿಪಡಿಸಲು ತಾಲೂಕಿನ ಎಲ್ಲಾ ಹೋಬಳಿ ಮಟ್ಟದಲ್ಲಿ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
 ಹೊಸ ಸೇರ್ಪಡೆ ಹಾಗೂ ಪರಿಷ್ಕರಣೆ ಕುರಿತು ಕಸಬಾ ಹಾಗೂ ಪಟ್ಟಣದಲ್ಲಿ ಮಾ.16ರಂದು ಪಟ್ಟಣ ಸೇರಿದಂತೆ ಕಸಬಾ ಹೋಬಳಿ, 18 ರಂದು  ನುಗ್ಗೇಹಳ್ಳಿಯಲ್ಲಿ, 20 ದಂಡಿಗನಹಳ್ಳಿ, 21ರಂದು ಶ್ರವಣಬೆಳಗೊಳ, 22 ಬಾಗೂರು ಹಾಗೂ ಹಿರೀಸಾವೆಯಲ್ಲಿ ಮಾ.23ರಂದು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
  ಪ್ರತಿ ಮತಗಟ್ಟೆಗಳಿಗೆ ಒಬ್ಬ ಅಧಿಕಾರಿ ನೇಮಿಸಿದ್ದು, ಅವರಿಗೆ 2013ನೇ ಸಾಲಿನ ಮತದಾರರ ಪಟ್ಟಿಯನ್ನು ನೀಡಲಾಗಿದೆ.  ಹೋಬಳಿ ಮಟ್ಟದ ಉಪತಹಸೀಲ್ದಾರ್, ರಾಜಸ್ವನಿರೀಕ್ಷಕರನ್ನು ಮತದಾರರ ಪಟ್ಟಿಯ ಪೂರ್ಣ ಪರಿಶೀಲನಾಧಿಕಾರಿಯನ್ನಾಗಿ ಆಯೋಜನೆ ಮಾಡಲಾಗಿದೆ. ಜಿಲ್ಲಾ, ತಾಪಂ ಗ್ರಾಪಂ ಜನಪ್ರತಿನಿಧಿಗಳು, ಪಿಡಿಒ, ಕಾರ್ಯದರ್ಶಿ ಭಾಗವಹಿಸಲಿದ್ದಾರೆ ಎಂದು ನುಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!