ಕ್ರೀಡಾಪುಟಗಳಿಗೆ ಕ್ರೀಡಾ ಮಾಸಾಶನ
ಹಾಸನ: ಜಿಲ್ಲಾ ಪಂಚಾಯ್ತಿ ಯೋಜನೆ ಅಡಿಯಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಸೇವೆ ಸಲ್ಲಿಸಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿರುವ 50 ವರ್ಷ ಮೇಲ್ಪಟ್ಟ ಮತ್ತು ಆರ್ಥಿಕವಾಗಿ ಕಷ್ಟದಲ್ಲಿರುವ ಕ್ರೀಡಾಪಟುಗಳಿಗೆ ಕ್ರೀಡಾ ಮಾಶಾಸನ ಮಂಜೂರಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಹಾಸನ (ದೂರವಾಣಿ-246056) ಸಂಪರ್ಕಿಸಲು ಕೋರಿದೆ.