ಹಾಸನ

ದಂಡಿಗನ ಹೋಬಳಿ: 2650 ಮನೆ ಮಂಜೂರು

ಕನ್ನಡಪ್ರಭವಾರ್ತೆ೤ ಚನ್ನರಾಯಪಟ್ಟಣ ೤ ಮಾ.16
ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ವಸತಿ ರಹಿತರಿಗೆ ಮನೆಗಳನ್ನು ನೀಡುವ ಉದ್ದೇಶದಿಂದ ದಂಡಿಗನಹಳ್ಳಿ ಹೋಬಳಿಗೆ 2650 ಮನೆಗಳನ್ನು ಮಂಜೂರು ಮಾಡಿಸಲಾಗಿದೆ ಎಂದು ಜೆಡಿಎಲ್‌ಪಿ ನಾಯಕ ಎಚ್.ಡಿ ರೇವಣ್ಣ ತಿಳಿಸಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಒಂದು ಸಾವಿರ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ಹೋಬಳಿಯಲ್ಲಿ ಯಾರೂ ಕೂಡ ಮನೆಯಿಲ್ಲ ಎಂದು ಹೇಳದಂತೆ ಎಲ್ಲಾ ಗ್ರಾಮಗಳಿಗೂ ಮನೆಗಳನ್ನು ವಿತರಣೆ ಮಾಡಿಲ್ಲ ಎಂದು ತಿಳಿಸಿದರು.
ದಂಡಿಗನಹಳ್ಳಿ ಹೋಬಳಿಯಲ್ಲಿ ಮನೆ ನೀಡುವಂತೆ 150 ಅರ್ಜಿ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ನೀಡಲಾಗುವುದು. ಹಾಗೂ ಹೋಬಳಿಯ ಕೆಲ ಗ್ರಾಮಗಳಿಗೆ ಕುಡಿಯುವ ನೀರು ನೀಡುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಆಡಳಿತಕ್ಕೆ ಬಂದರೆ ವೃದ್ಧಾಪ್ಯ ವೇತನವನ್ನು 400 ರು. ರಿಂದ 1500 ರು.ಗೆ ಹಾಗೂ ಅಂಗವಿಕಲರಿಗೆ ಒಂದು ಸಾವಿರದಿಂದ 2500 ರು.ಗಳಿಗೆ ಏರಿಸಲಾಗುವುದು ಎಂದರು.
 ಕೇಂದ್ರ ಸರ್ಕಾರ ಖಾತ್ರಿ ಯೋಜನೆಗೆ ಹಣ ಮಂಜೂರಾತಿ ನೀಡದೆ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡಿದ್ದು, ಜಿಲ್ಲೆಗೆ 30 ಕೋಟಿ ರು. ನೀಡಬೇಕಾಗಿದೆ ಎಂದರು. ತಾಪಂ ಅಧ್ಯಕ್ಷೆ ಹೇಮಾವತಿ, ಜಿಪಂ ಸದಸ್ಯ ಶಿವಶಂಕರ್‌ಕುಂಠೆ, ದ್ಯಾವೇಗೌಡ, ನಿಂಗರಾಜಪ್ಪ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ