ಹಾಸನ

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಚನ್ನರಾಯಪಟ್ಟಣ: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿ ಆಕೆಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಬಾಲಕಿ ಗುರುವಾರ ಶಾಲೆ ಮುಗಿಸಿಕೊಂಡು ಪಟ್ಟಣದ ಗಣೇಶನಗರದಲ್ಲಿರುವ ಹಾಸ್ಟೆಲ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ಇಬ್ಬರು ಯುವಕರು ಆಕೆಯನ್ನು ಅಪಹರಿಸಿ ಹೊಳೆನರಸೀಪುರ ಬಳಿಗೆ ಕರೆದೊಯ್ದು ಆಕೆಯ ಮೈಮೇಲೆ ಸಿಗರೇಟಿನಿಂದ ಸುಟ್ಟಿರುವುದಲ್ಲದೆ, ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾರೆ ಎಂದು ಪಟ್ಟಣ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದಾರೆ.  ಕಾರು ಹೊಳೆನರಸೀಪುರ ಬಳಿ ಹೋಗುತ್ತಿದ್ದಂತೆ ಬಾಲಕಿ ಮೇಲೆ ಅತ್ಯಾಚಾರಕ್ಕೆ ಮುಂದಾಗಿ ಆಕೆಯ ಬಟ್ಟೆಯನ್ನು ಹರಿದು ಹಾಕಿದ ಸಂದರ್ಭದಲ್ಲಿ ಆಕೆ ಇಬ್ಬರಿಗೂ ಹಲ್ಲಿನಿಂದ ಕಚ್ಚಿ ಅಲ್ಲಿಂದ ಪರಾರಿಯಾಗಿ ಹೊಳೆನರಸೀಪುರ ಬಸ್‌ಸ್ಟ್ಯಾಂಡ್‌ಗೆ ತೆರಳಿದಳು. ಇದೇ ವೇಳೆ ಅಲ್ಲಿದ್ದ ಸಾರ್ವಜನಿಕರು ಅವಳನ್ನು ಹಾಸ್ಟೆಲ್‌ಗೆ ಕರೆದೊಯ್ದು ಆಸರೆ ನೀಡಿದ್ದಾರೆ. ಪಟ್ಟಣ ಪೋಲಿಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ