ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ರೇವಣ್ಣ
ಅರಕಲಗೂಡು: ಪರೀಕ್ಷೆ ಎಂಬುದನ್ನು ಬೆಟ್ಟದಂತೆ ಕಾಣಬೇಡಿ. ಆತ್ಮ ವಿಶ್ವಾಸದಿಂದ ಕಾಣಿ. ಇದರಿಂದ ನಿಮ್ಮ ಯಶಸ್ಸು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ರೇವಣ್ಣ ವಿದ್ಯಾರ್ಥಿಗಳಿಗೆ ಕರೆ ಇತ್ತರು.
ಇಲ್ಲಿನ ಶಿಕ್ಷಕರ ಭವನದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಶಿಶು ಅಭಿವೃದ್ಧಿ ಯೋಜನೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಿಜಿಎಸ್ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮಕ್ಕಳೇ ಪರೀಕ್ಷೆಗೆ ಸಿದ್ದರಾಗಿ ಎಂಬ ಸಲಹಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪರೀಕ್ಷೆ ಎಂದರೆ ಭಯ, ಆತಂಕಗಳ ನಡುವೆ ವಿದ್ಯಾರ್ಥಿಗಳು ನಲುಗಿ ಹೋಗುವ ಪರಿಸ್ಥಿತಿಯನ್ನು ನಾವು ಕಾಣುತ್ತೇವೆ.ಇದಕ್ಕೆ ಪೋಷಕರೂ ಹೊಣೆಗಾರರಾಗಿದ್ದಾರೆ.ಮಕ್ಕಳಲ್ಲಿ ಆತ್ಮ ವಿಶ್ವಾಸ ತುಂಬುವ ಬದಲು ಪಾಲಕರು ಭಯ ಮತ್ತು ಆತಂಕ ತುಂಬುತ್ತಿರುವುದನ್ನು ಕಾಣುತ್ತಿದ್ದೇವೆ.ಇದು ಒಳ್ಳೆಯದಲ್ಲ ಎಂದು ಅಭಿಪ್ರಾಯಪಟ್ಟರು.