ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬೇಲೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮ

Parashurama
Updated On : 19 Mar 2013, 9:58 am

ಕ.ಪ್ರ.ವಾರ್ತೆ೤ ಬೇಲೂರು ೤ ಮಾ.19
ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಬಿ.ಬಿ.ಶಿವಪ್ಪ ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಬೇಲೂರಿನ ಬಸವೇಶ್ವರ ವೃತ್ತದಲ್ಲಿ ಕಾರ್ಯಕರ್ತರು ಸೋಮವಾರ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸದಸ್ಯ ಅಮಿತ್‌ಶೆಟ್ಟಿ ಬಹಳ ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿ ಶಾಸಕರಾಗಿ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿದ್ದ ಶಿವಪ್ಪ ಅವರನ್ನು ಬಿಜೆಪಿ ಸರ್ಕಾರ ವಿಧಾನ ಪರಿಷತ್ ಸದಸ್ಯರಾಗಿ ನೇಮಕ ಮಾಡಿರುವುದು ಪಕ್ಷಕ್ಕೆ ಬಲ ಬಂದಿದ್ದು ಮುಂದಿನ ದಿನಗಳಲ್ಲಿ ಪಕ್ಷ ಉನ್ನತವಾಗಿ ಬೆಳೆಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು. ಜಿಲ್ಲಾಧ್ಯಕ್ಷ ಕೃಷ್ಣೇಗೌಡ, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ನವಿಲೆ ಅಣ್ಣಪ್ಪ, ಜಿಪಂ ಸದಸ್ಯ ಲಕ್ಷ್ಮಣ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಟೇಶ್ ಕುಮಾರ್, ತಾಲೂಕು ಅಧ್ಯಕ್ಷ ರೇಣುಕುಮಾರ್, ತಾಪಂ ಸದಸ್ಯ ಶೇಖರಯ್ಯ, ಮುಖಂಡ ಅಭಿಗೌಡ, ಎಚ್.ಎಲ್.ಮೋಹನ್, ಪ್ರಸನ್ನ ಕುಮಾರ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments