28 ರಂದು ಅಂಚೆ ಅದಾಲತ್
ಹಾಸನ: ಸಾರ್ವಜನಿಕರು ಅಂಚೆ ವ್ಯವಸ್ಥೆಯ ಕುಂದು ಕೊರತೆಗಳ ಬಗ್ಗೆ ತಮ್ಮ ಅಹವಾಲು ನೀಡಲು ಮಾ. 28ರಂದು ಬೆಳಿಗ್ಗೆ 10.30ಕ್ಕೆ ನಗರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಅಂಚೆ ಅದಾಲತ್ ಏರ್ಪಡಿಸಲಾಗಿದೆ. ಸಾರ್ವಜನಿಕರು ಅಂಚೆ ಸೇವೆಯ ಬಗ್ಗೆ ಕುಂದು ಕೊರತೆಗಳು ಏನಾದರೂ ಇದ್ದಲ್ಲಿ ಕಚೇರಿಗೆ ಮಾ. 26ರೊಳಗೆ ಸಲ್ಲಿಸಬೇಕೆಂದು ಹಾಸನ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಇಂದು ಕಾನೂನು ಅರಿವು-ನೆರವು
ಅರಕಲಗೂಡು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬುಧವಾರ ಕಾನೂನು ಅರಿವು ನೆರವು ಶಿಬಿರ ಆಯೋಜಿಸಲಾಗಿದೆ. ತಾ. ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಮರಿಯಾನಗರದಲ್ಲಿ ಹಮ್ಮಿಕೊಂಡಿರುವ ಶಿಬಿರವನ್ನು ಹಿರಿಯ ವ್ಯವಹಾರ ನ್ಯಾಯಾಧೀಶ ಡಿ.ಕಂಬೇಗೌಡ ಉದ್ಘಾಟಿಸುವರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.