ಟಿಪ್ಪರ್ ಜಲ್ಲಿ ಕ್ರಸರ್ಗೆ ಡಿಕ್ಕಿ: ವ್ಯಕ್ತಿ ಸಾವು
ಕ.ಪ್ರವಾರ್ತೆ ಹಾಸನ ಮಾ. 18
ಟಿಪ್ಪರ್ ಜಲ್ಲಿ ಕ್ರಸರ್ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ಸೋಮವಾರ ನಡೆದಿದೆ. ಮಹಾರಾಷ್ಟ್ರದ ಸಂತೋಷ ಕೆಂದ್ರೆ (24) ಸಾವನ್ನಪ್ಪಿದ ದುರ್ದೈವಿ.
ತಾಲೂಕಿನ ಕಟ್ಟಾಯ ಹೋಬಳಿ ಹುಲಿಹಳ್ಳಿ ರಸ್ತೆ ಗೌಸ್ರವರ ಜೆಲ್ಲಿ ಕ್ರಸರ್ನಲ್ಲಿ ಕೆಲಸ ಮಾಡಿಕೊಂಡು ಜೆಲ್ಲಿ ಕ್ರಸರ್ ಟ್ಯಾಂಕ್ ಕೆಳಭಾಗದಲ್ಲಿ ಕೆಂದ್ರೆ ಮಲಗಿದ್ದ ಸಂದರ್ಭದಲ್ಲಿ ಟಿಪ್ಪರ್ ಲಾರಿ ಚಾಲಕನ ನಿರ್ಲಕ್ಷ್ಯತೆಯಿಂದ ಡಿಕ್ಕಿ ಮಾಡಿದ ಪರಿಣಾಮ ಕೆಂದ್ರೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರತ್ಯಕ್ಷದರ್ಶಿ ಹನುಮಂತಪ್ಪ ಗೊರೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.