ಮಂಜ್ರಾಬಾದ್ ಕೋಟೆಗೆ ಅಧಿಕಾರಿಗಳ ತಂಡ ಭೇಟಿ
ಕ.ಪ್ರ ವಾರ್ತೆ ಸಕಲೇಶಪುರ ಮಾ.19
ಅಭಿವೃದ್ಧಿ ಹಿನ್ನೆಲೆಯಲ್ಲಿ ತಾಲೂಕಿನ ದೋಣಿಗಾಲ ಸಮೀಪದ ಐತಿಹಾಸಿಕ ಮಂಜ್ರಾಬಾದ್ ಕೋಟೆಗೆ ಭಾನುವಾರ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಪರಂಪರಾ ಕಟ್ಟಡ ಅಭಿವೃದ್ಧಿ ಅನುದಾನದ 22 ಲಕ್ಷ ರು. ವೆಚ್ಚದಲ್ಲಿ ಮೆಟ್ಟಿಲುಗಳ ನಿರ್ಮಾಣ, ಬೀದಿ ದೀಪಗಳ ವ್ಯವಸ್ಥೆ ಇನ್ನಿತರ ಕಾಮಗಾರಿಗಳನ್ನು ನಡೆಸಲಾಗುತ್ತಿದೆ.
ಜಿಲ್ಲಾಡಳಿತದಿಂದ ಮಲೆನಾಡು ಅಭಿವೃದ್ಧಿ ಯೋಜನೆಯಡಿ ಸುಮಾರು 67.66 ಲಕ್ಷ ರು. ವೆಚ್ಚದಲ್ಲಿ ಕೋಟೆಯನ್ನು ಮೇಲ್ದರ್ಜೆಗೇರಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಸಿ.ಕೆ. ಮಂಜುನಾಥ್ ಮತ್ತು ಜಿಲ್ಲಾಧಿಕಾರಿ ಕಚೇರಿ ವಿಶೇಷ ಅಧಿಕಾರಿ ಮಥಾಯಿ ನೇತೃತ್ವದ ತಂಡ ಪರಿಶೀಲನೆ ನಡೆಸಿತು.
ಮಥಾಯಿ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿ ಪ್ರವಾಸಿಗರು ಮಂಜ್ರಾಬಾದ್ ಕೋಟೆಯ ಮೇಲ್ಬಾಗ ನಿಂತು ಪಶ್ಚಿಮ ಘಟ್ಟದ ಸೌಂದರ್ಯ ಸವಿಯಲು ಅನುಕೂಲವಾಗುವಂತೆ ದೂರದರ್ಶಕ ಅಳವಡಿಕೆ ಮಾಡಬೇಕೆಂಬ ಯೋಜನೆಯಿದ್ದು, ಬೆಂಗಳೂರಿನ ನೆಹರೂ ತಾರಾಲಯ ನಿರ್ದೇಶನದಂತೆ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು. ಜಿಲ್ಲಾ ವಿಜ್ಞಾನ ಕೇಂದ್ರದ ಶಿವನ್ ಪಾಟೀಲ್, ಸುಬ್ಬಣ್ಣ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.