ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಹಾಸನ: ಹಾಸನ-ಸಕಲೇಶಪುರ ವಿದ್ಯುತ್ ಪ್ರಸರಣ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 22ರಂದು ಜಿಲ್ಲೆಯ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಜಿಲ್ಲೆಯ ಆಲೂರು, ಕಂದಲಿ, ಮಗ್ಗೆ, ಬಾಳ್ಳುಪೇಟೆ, ಸಕಲೇಶಪುರ, ಹಾನುಬಾಳು ಮತ್ತು ಅರೇಹಳ್ಳಿ ಸುತ್ತಮುತ್ತಲ ಗ್ರಾಮಗಳಿಗೆ ಬೆಳಗ್ಗೆ 11 ರಿಂದ ಸಂಜೆ 4ರವರೆಗೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಉಚಿತ ತರಬೇತಿ
ಹಾಸನ: ಸ್ವಾಮಿ ವಿವೇಕಾನಂದ ಯೂತ್ಮೂವ್ಮೆಂಟ್ನಿಂದ ವಿವೇಕ ಸ್ಕಾಲರ್ ಎಂಬ ಕಾರ್ಯಕ್ರಮದ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ತರಗತಿಗಳು ನಡೆಯುತ್ತವೆ. 10ನೇ ತರಗತಿಯಲ್ಲಿ ಶೇ. 75ಕ್ಕಿಂತ ಅಧಿಕ ಅಂಕ ಗಳಿಸಿರುವ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಯಾವುದೇ ವಿದ್ಯಾರ್ಥಿಗಳು ಉಚಿತ ತರಗತಿಗಳ ಅನುಕೂಲ ಪಡೆದು ಕೊಳ್ಳಬಹುದು. ಅರ್ಜಿ ಸಲ್ಲಿಸಿಲು ಮಾ. 31 ಕೊನೆ ದಿನ. ಪಿಸಿಎಂಬಿ ವಿಷಯಗಳಿಗೆ ಉಚಿತ ತರಗತಿ ನಡೆಯುತ್ತವೆ. ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್, ಬ್ರಹ್ಮಕೃಪ ನಿವಾಸ, 9ನೇ ಕ್ರಾಸ್, ಮಲ್ನಾಡ್ ನಸಿಂರ್ಂಗ್ ಹೋಂ ಹಿಂಭಾಗ, ಕೆ.ಆರ್. ಪುರಂ, ಹಾಸನ, ಅಥವಾ ಮೊ. 9980955140 ಅಥವಾ 9900022319 ಸಂಪರ್ಕಿಸಲು ಕೋರಲಾಗಿದೆ.
ಸನ್ಮಾನ: ಅರ್ಜಿ ಆಹ್ವಾನ
ಹಾಸನ: ಅಖಿಲ ಕರ್ನಾಟಕ ಪ್ರಪ್ರಥಮ ವಚನ ಸಾಹಿತ್ಯ ಸಮ್ಮೇಳನದಲ್ಲಿ ನಾನಾ ಕ್ಷೇತ್ರದಲ್ಲಿ ಸೇವೆ ಮಾಡಿದ ಬಾಲಕ ಬಾಲಕಿಯರಿಗೆ ಸನ್ಮಾನಕ್ಕೆ ಆಹ್ವಾನಿಸಲಾಗಿದೆ. ಜಿಲ್ಲಾ ವಚನ ಸಾಹಿತ್ಯ ಪರಿಷತ್ ವತಿಯಿಂದ ಏ.20 ರಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ನಾನಾ ಕ್ಷೇತ್ರದ 12-18 ವರ್ಷದೊಳಗಿನ ಬಾಲಕ ಬಾಲಕಿಯರನ್ನು ಗುರುತಿಸಿ ಕರ್ನಾಟಕ ಕಲಾಶ್ರೀ ರಾಜ್ಯ ಪ್ರಶಸ್ತಿ ನೀಡಲಾಗುವುದು. ಆಸಕ್ತರು ಮಾ.25ರ ಒಳಗೆ ನಾಯಕರಹಳ್ಳಿ ಮಂಜೇಗೌಡ, ಅಧ್ಯಕ್ಷ ಜಿಲ್ಲಾ ವಚನ ಸಾಹಿತ್ಯ ಪರಿಷತ್, ಅಕ್ಷಯ ಭಂಡಾರ ಸಮೀಪ, ಗಣಪತಿ ದೇವಸ್ಥಾನದ ರಸ್ತೆ, ಪಿ ಅಂಡಡ್ಟಿ ಕಾಲೋನಿ ಹಾಸನ, ಮೊ.9448318011 ಸಂಪರ್ಕಿಸಿ.
ಸಾರ್ವಜನಿಕರಿಗೆ ಈಜುಕೊಳ
ಹಾಸನ: ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಇರುವ ಈಜುಕೊಳ ಸಾರ್ವಜನಿಕರಿಗೆ ಲಭ್ಯವಿದ್ದು, ಇದರ ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ಮೊ. 9481544513 ಹಾಗೂ 9844564959 ಸಂಪರ್ಕಿಸಲು ಕೋರಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.