ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಡೆಗೆ ತನಿಖಾ ದಳ
ಕನ್ನಡಪ್ರಭವಾರ್ತೆ ಹಾಸನ ಮಾ.21
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ತನಿಖಾ ದಳ ರಚಿಸಿದ್ದು, ಸದರಿ ತನಿಖಾ ದಳ ವಾರದಲ್ಲಿ ಎರಡು ದಿನ ಕಡ್ಡಾಯವಾಗಿ ಕಾರ್ಯನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದ್ದಾರೆ.
ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತನಿಖಾ ದಳದ ಮೂಲಕ ದಂಡದ ರೂಪದಲ್ಲಿ ಸಂಗ್ರಹಿಸಲ್ಪಟ್ಟ ಮೊತ್ತ ಜಿಲ್ಲಾ ತಂಬಾಕು ನಿಷೇಧ ಕೋಶ ಪ್ರತ್ಯೇಕವಾಗಿ ತೆರೆದಿರುವ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವಂತೆ ತಿಳಿಸಿದರು.
2012 ಅಕ್ಟೋಬರ್ನಿಂದ 2013 ಫೆಬ್ರವರಿ ಅಂತ್ಯದವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ 261 ಜನರಿಂದ 52200 ರು. ದಂಡ ವಸೂಲಿ ಮಾಡಲಾಗಿದೆ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಎಲ್.ಶ್ಯಾಮಲಾದೇವಿ, ಸಮಾಜ ಸೇವಕ ಎಚ್.ಎಂ.ಶಿವಣ್ಣ ಹಾಗೂ ನಾನಾ ಅಧಿಕಾರಿಗಳು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.