55 ವಿದ್ಯಾರ್ಥಿಗಳಿಗೆ ಜೇನು ಕಡಿತ
ಸಕಲೇಶಪುರ: ಶಾಲಾ ವಿದ್ಯಾರ್ಥಿಗಳ ಮೇಲೆ ಜೇನುನೊಣಗಳು ದಾಳಿ ನಡೆಸಿದ್ದರಿಂದ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಪಟ್ಟಣದ ಕುಡುಗರಹಳ್ಳಿ ಬಡಾವಣೆಯಲ್ಲಿ ಸೋಮವಾರ ನಡೆದಿದೆ. ಪಟ್ಟಣದ ಕುಡುಗರಹಳ್ಳಿ ಬಡಾವಣೆಯಲ್ಲಿ ಬೆಳಗ್ಗೆ 9.30ಕ್ಕೆ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದರು. ಆಗ ಜೇನುನೊಣಗಳು ಶಾಲೆಯ ಆವರಣದಲ್ಲಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದವು. ಸರ್ವಾಜನಿಕರು ಕಡಿತಕ್ಕೊಳಗಾದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸಿದರು.