ಎಚ್ಐವಿ ಸೋಂಕು ತಡೆ ತರಬೇತಿ ಕಾರ್ಯಾಗಾರ
ಹಾಸನ: ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಮತ್ತು ಸ್ವಾಮಿ ವಿವೇಕಾನಂದ ಯೂತ್ಮೂವ್ಮೆಂಟ್ ಆಶ್ರಯದಲ್ಲಿ ಪೋಷಕರಿಂದ ಮಗುವಿಗೆ ಹರಡುವ ಎಚ್ಐವಿ ಸೋಂಕನ್ನು ತಡೆಗಟ್ಟುವ ಯೋಜನೆಯಡಿಯಲ್ಲಿ ಖಾಸಗಿ ಆಸ್ಪತ್ರೆಯ ದಾದಿಯರಿಗೆ ಮಾ. 26 ರಿಂದ ಮಾ. 28 ರವರೆಗೆ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಮಾ.26 ರಂದು ಬೆ.10ಕ್ಕೆ ಜಿಲ್ಲಾ ಆರೋಗ್ಯ,ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಉದ್ಘಾಟನಾ ಸಮಾರಂಭವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಎಲ್.ಶ್ಯಾಮಲಾದೇವಿ ನೆರವೇರಿಸುವರು. ಪಿ.ಎಲ್. ಡಾ.ನಟರಾಜ್ ಅಧ್ಯಕ್ಷತೆ ವಹಿಸುವರು. ಡಾ.ಸುಧೀರ್ ಬಿ. ಭಾಗವಹಿಸುವರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.