ಕಾನೂನು ಬಳಕೆಗಿಂತಲೂ ಅರಿವು ಅವಶ್ಯಕ: ನ್ಯಾಯಾಧೀಶ ಹಾಲಪ್ಪ
ಹಾಸನ: ಜನಸಾಮಾನ್ಯರಿಗೆ ಕಾನೂನು ಬಳಕೆಗಿಂತಲೂ ಪ್ರಥಮವಾಗಿ ಕಾನೂನು ಅರಿಯುವುದು ಅವಶ್ಯಕ ಎಂದು 2ನೇ ತ್ವರಿತಗತಿ ನ್ಯಾಯಾಲಯ ನ್ಯಾಯಾಧೀಶ ಸಿ.ಹಾಲಪ್ಪ ತಿಳಿಸಿದರು.
ನಗರದ ಬಿಈಜಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ನಾನಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಏರ್ಪಡಿಸಿದ್ದ ಜನತಾ ನ್ಯಾಯಾಲಯ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾನೂನಿನ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶ ಎಂದರು.
ವಕೀಲ ಬಿ.ಚಂದ್ರಶೇಖರ್ ಮಾತನಾಡಿ, ಮಾಹಿತಿ ಎಂದರೇನು ಯಾವ ಈ ಹಕ್ಕನ್ನು ಬಳಸಬಹುದು, ಬಳಸುವ ವಿಧಾನ, ಯಾರಿಂದ ಮಾಹಿತಿ ಪಡೆಯಬಹುದು ಎಂದು ವಿವರಿಸಿದರು.
ವಕೀಲ ಜೆ.ಪಿ.ಲಕ್ಮನ್ ಮಾತನಾಡಿ, ವಾಹನ ನೋಂದಣಿ, ವಾಹನ ವಿಮೆ, ಚಾಲನಾ ಪರವಾನಗಿ, ವಾಹನದ ವಿಧ, ಪರ್ಮಿಟಟ್ಮುಂತಾದ ವಾಹನ ನಿಯಮಾವಳಿಯ ಹಾಗೂ ಅಪಘಾತವಾದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು, ಮುಂತಾದ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಬಿ.ಈ.ಜಗದೀಶ್ ಮಾತನಾಡಿದರು.
ಕಾನೂನು ಸಲಹೆಗಾರ ಬಿ.ಈ.ನಟೇಶ್‌ಕುಮಾರ್, ಸರ್ಕಾರಿ ಕಾನೂನು ಕಾಲೇಜಿನ ಸಹ ಪ್ರಾಧ್ಯಾಪಕಿ ರೇಖಾ ಚೌವ್ಹಾಣ್, ಬಿಈಜಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.