ಕೇಂದ್ರಿಯ ಪೊಲೀಸ್ ಕಾನ್ಸ್ಟೇಬಲ್ಸ್ ತರಬೇತಿ
ಹಾಸನ: ಕೇಂದ್ರ ಸರ್ಕಾರದ ಪೊಲೀಸ್ ಪಡೆಗಳಾದ ಸಿಆರ್ಪಿಎಫ್, ಸಿಐಎಸ್ಎಫ್, ಬಿಎಸ್ಎಫ್, ಐಟಿಬಿಪಿ ಮತ್ತು ಅಸ್ಸಾಂ ರೈಫಲ್ಸ್ನಲ್ಲಿ ಕಾನ್ಸ್ಟೇಬಲ್ಸ್ ನೇಮಕಾತಿಗೆ ಅರ್ಜಿ ಕರೆದಿದ್ದು ಈಗಾಗಲೇ ದೇಹಾದಾರ್ಢ್ಯ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವವರಿಗೆ ಏಪ್ರಿಲ್ 12 ರಂದು ಲಿಖಿತ ಪರೀಕ್ಷೆ ನಡೆಯಲಿದೆ.
ಇದರಲ್ಲಿ ಜನರಲ್ ಇಂಟೆಲಿಜೆನ್ಸ್, ಮ್ಯಾಥಮ್ಯಾಟಿಕ್ಸ್, ಜನರಲ್ ಅವೇರ್ನೆಸ್ ಮತ್ತು ಇಂಗ್ಲಿಷ್ ವಿಷಯ ಗಳಿರುತ್ತವೆ. ಈ ಪರೀಕ್ಷೆ 100 ಅಂಕಗಳ ಬಹು ಆಯ್ಕೆ ವಿಧಾನದಲ್ಲಿರುತ್ತದೆ. ಈ ಪರೀಕ್ಷೆಯಲ್ಲಿ ಯಶಸ್ಸು ಗಳಿಸುವಂತೆ ಜಿಲ್ಲೆಯ ಕೃಷಿಕ್ ಸರ್ವೋದಯ ಫೌಂಡೇಷನ್ ಪರೀಕ್ಷಾ ಪೂರ್ವ ತರಬೇತಿಯನ್ನು ರಿಯಾಯಿತಿ ದರದಲ್ಲಿ ಮಾ. 24 ರಿಂದ ಪ್ರಾರಂಭಿಸಲಿದೆ. ಪರೀಕ್ಷೆ ಬರೆಯಬೇಕಾಗಿರುವವರು ಕೂಡಲೇ ತಮ್ಮ ಹೆಸರುಗಳನ್ನು ಹಾಸನ ಕೆ.ಎಸ್.ಎಫ್ನಲ್ಲಿ ನೊಂದಾಯಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆ.ಎಸ್.ಎಫ್ನ್ನು ಖುದ್ದಾಗಿ ಅಥವಾ ದೂರವಾಣಿ 9845493336.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.