ನೀತಿ ಸಂಹಿತೆ ಉಲ್ಲಂಘನೆ ತಡೆಗೆ 14 ತಂಡಗಳ ರಚನೆ: ತಹಸೀಲ್ದಾರ್ ನಟರಾಜ್
ಚನ್ನರಾಯಪಟ್ಟಣ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ತಡೆಗೆ 14 ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಹಸಿಲ್ದಾರ್ ಪಿ. ಜಿ. ನಟರಾಜ್ ಹೇಳಿದ್ದಾರೆ.
ವಿಧಾನಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ತಾಲೂಕು ಕಚೇರಿಯಲ್ಲಿ ಇತ್ತೀಚೆಗೆ ಸಭೆ ನಡೆಸಿ ಮಾತನಾಡಿದ ಅವರು, ಪಟ್ಟಣ ಸೇರಿದಂತೆ 6 ಹೋಬಳಿಗೆ 7 ತಂಡ ರಚನೆ ಮಾಡಲಾಗಿದ್ದು 12 ಗಂಟೆಗಳ ಕಾಲ ಈ ತಂಡಗಳು ಕಾರ್ಯನಿರ್ವಹಿಸಲಿವೆ. ಒಟ್ಟು ಎರಡು ತಂಡಗಳು ಸೇರಿ ದಿನದ 24 ಗಂಟೆಗಳು ಕಾರ್ಯಮಾಡಲಿವೆ. ಇದರಲ್ಲಿ 4 ಅಧಿಕಾರಿಗಳು ಇರುತ್ತಾರೆ. ಈ ತಂಡ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುತ್ತದೆ. ಬರಗಾಲವಿರುವ ಕಾರಣ ನೀರಿನ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು, ನ್ಯಾಯ ಸಮ್ಮತ, ನಿರ್ಭೀತ, ಚುನಾವಣೆ ನಡೆಸಲು ಅಧಿಕಾರಿಗಳು ಶ್ರಮಿಸಬೇಕೆಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.