ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬಿಜೆಪಿ, ತಾಲೂಕು ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ: ಕಾಟೀಕೆರೆ ಪ್ರಸನ್ನಕುಮಾರ್

Parashurama
Updated On : 25 Mar 2013, 10:24 am

ಕನ್ನಡಪ್ರಭ ವಾರ್ತೆ  ಅರಸೀಕೆರೆ ಮಾ. 25
ಪಕ್ಷದ ಅಸ್ತಿತ್ವಕ್ಕಾಗಿ ನಿರಂತರ ಎರಡು ದಶಕಗಳ ಕಾಲ ಹೋರಾಟ ನಡೆಸಿದ ನಿಷ್ಠಾವಂತ ಕಾರ್ಯಕರ್ತರು ಹಾಗೂ ಮುಖಂಡರನ್ನು ಕಡೆಗಣಿಸಿರುವ ರಾಜ್ಯ ಬಿಜೆಪಿ ವರಿಷ್ಠರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ವರ್ತನೆ ಖಂಡಿಸಿ ತಾಲೂಕು ಬಿಜೆಪಿ ಅಧ್ಯಕ್ಷ ಸ್ಥಾನ,  ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ತಾಲೂಕು ಬಿಜೆಪಿ ಅಧ್ಯಕ್ಷ ಕಾಟೀಕೆರೆ ಪ್ರಸನ್ನಕುಮಾರ್ ಘೋಷಿಸಿದ್ದಾರೆ.
ಈ ಸಂಬಂಧ ಕನ್ನಡಪ್ರಭದೊಂದಿಗೆ ಮಾತನಾಡಿದ ಅವರು, ಕಳೆದ ಎರಡೂವರೆ ದಶಕಗಳಿಂದ ತಾಲೂಕಿನಲ್ಲಿ ಪಕ್ಷ ಕಟ್ಟಲು ಪ್ರಮಾಣಿಕ ಪ್ರಯತ್ನ ನಡೆಸುವ ಮೂಲಕ ಜಿಲ್ಲಾ ಉಪಾಧ್ಯಕ್ಷನಾಗಿ, ತಾಲೂಕು ಅಧ್ಯಕ್ಷನಾಗಿ ಶ್ರಮಿಸಿದ್ದೇನೆ. ಆದರೆ ಇದನ್ನು ಪರಿಗಣಿಸದ ರಾಜ್ಯ ವರಿಷ್ಠರು ಹಾಗೂ ಸಂಘ ಪರಿವಾರದ ಸದಸ್ಯರು ಮನಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಬೇಸರಗೊಂಡು ಪಕ್ಷ ತೊರೆಯುವ ಮನಸ್ಸು ಮಾಡಿರುವುದಾಗಿ ಹೇಳಿದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಾವು ಕೂಡ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಬಯಕೆ ಹೊಂದಿದ್ದು ಈ ಸಂಬಂಧ ಪಕ್ಷದ ಮುಖಂಡರ ಜೊತೆ ಮಾತುಕತೆ ನಡೆಸಿದರೂ ಯಾವುದೇ ಉಪಯೋಗವಿಲ್ಲ. ಪಕ್ಷ ಸಂಘಟಿಸುವವರಿಗೆ ಹಾಗೂ ಕಾರ್ಯಕರ್ತರ ಬಲ ಹೊಂದಿರುವವರಿಗೆ ಪಕ್ಷದಲ್ಲಿ ಆದ್ಯತೆ ನೀಡುತ್ತಿಲ್ಲ. ತಮ್ಮ ಬೆಂಬಲಿಗರೊಂದಿಗೆ ಶೀಘ್ರವೇ ಯಡಿಯೂರಪ್ಪನವರ ಕೆಜೆಪಿ   ಸೇರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments