ಬ್ಯಾಂಕ್ನಿಂದ ತೆಗೆವ ಹಣದ ಮಾಹಿತಿ ನೀಡಿ
ಹಾಸನ: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬ್ಯಾಂಕುಗಳಲ್ಲಿ ದೊಡ್ಡ ಪ್ರಮಾಣದಲ್ಲಿ ತೆಗೆಯಲಾಗುವ ಹಣದ ಬಗ್ಗೆ ನಿಗಾವಹಿಸಿ ವರದಿ ನಿಡಲು ಎಲ್ಲಾ ಬ್ಯಾಂಕ್ ಮುಖ್ಯಸ್ಥರಿಗೆ ಸೂಚಿಸಿರುವುದಾಗಿ ಜಿಲ್ಲಾಧಿಕಾರಿ ಕೆ.ಪಿ ಮೋಹನ್ ರಾಜ್ ತಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಭಾನುವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ರಾಜಕೀಯ ಪಕ್ಷದ ಪ್ರತಿನಿಧಿಗಳು , ಸಾರ್ವಜಿನಿಕರು ತಾವು ತಮ್ಮ ಬಳಿಕ ಇಟ್ಟುಕೊಂಡಿರುವ ಹಣಕ್ಕೆ ಸೂಕ್ತ ದಾಖಲೆಗಳನ್ನು ಹೊಂದಿರುವಂತೆ ಮತ್ತು ತಪಾಸಣೆ ವೇಳೆ ಸಹಕರಿಸುವಂತೆ ಕೋರಿದ್ದಾರೆ. ಚುನಾವಣಾಧಿಕಾರಿಯವರ ನೇಮಕಾತಿ ಆದೇಶ ನಾಳೆ ನೀಡಲಾಗುವುದು. ಈಗಾಗಲೇ ಎಲ್ಲಾ ತಾಲೂಕುಗಳಿಗೆ ಜಿಲ್ಲಾ ಮಟ್ಟದ ಅಧಿಕಾರಗಳನ್ನು ಒಳಗೊಂಡ ತಂಡ ರಚಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ. ಸಂಚಾರಿ ನಿಗಾ ದಳ, ಚೆಕ್ಪೋಸ್ಟ್ಗಳ ಸ್ಥಾಪನೆಯನ್ನು ಮಾಡಲಾಗುವುದು ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.