ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವಿದ್ಯುತ್ ಪರಿವರ್ತಕ ಬದಲಿಸಲು ಆಗ್ರಹಿಸಿ ಪ್ರತಿಭಟನೆ

Parashurama
Updated On : 26 Mar 2013, 9:59 am

ಕ.ಪ್ರ.ವಾರ್ತೆ ಅರಸೀಕೆರೆ ಮಾ 26
ವಿದ್ಯುತ್ ಪರಿವರ್ತಕ ಸುಟ್ಟು ಹೋಗಿ ಅನೇಕ ತಿಂಗಳುಗಳೇ ಕಳೆದು, ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದರೂ ಗಮನ ಹರಿಸದ ಇಲಾಖೆಯ ನಿರ್ಲಕ್ಷ್ಯ ಖಂಡಿಸಿ ತಾಲೂಕು ಹಸಿರು ಸೇನೆ ಹಾಗೂ ರೈತ ಸಂಘದ ಕಾರ್ಯಕರ್ತರು ಪಟ್ಟಣದ ಸೆಸ್ಕ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ದರು.
ತಾಲೂಕಿನ ಮೇಳೇನಹಳ್ಳಿಯಲ್ಲಿ 2 ತಿಂಗಳಿಂದ ವಿದ್ಯುತ್ ಪರಿವರ್ತಕ ಕೆಟ್ಟು ಹೋಗಿದ್ದು, ಈ ಬಗ್ಗೆ ಹಲವಾರು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ವಿದ್ಯುತ್
ಪರಿವರ್ತಕ ಅಳವಡಿಸದಿದ್ದರೆ ಪ್ರತಿಭಟನೆ ಕೈಬಿಡುವುದಿಲ್ಲವೆಂದು ಪಟ್ಟು ಹಿಡಿದರು.
ತಾಲೂಕು ಹಸಿರುಸೇನೆ ಅಧ್ಯಕ್ಷ ನಾಗರಾಜ್ ಮಾತನಾಡಿ, ವಿದ್ಯುತ್ ಪರಿವರ್ತಕ ಸುಟ್ಟು ಹೋಗಿದ್ದು ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಎಸ್.ಓ.ಧನಂಜಯರವರಿಗೆ ಮನವಿ ಮಾಡಿದ್ದರೂ ಸಮಸ್ಯೆಯ ಗಂಭೀರತೆಯ ಬಗ್ಗೆ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ.
 ಇಲಾಖೆಯವರು ಕೂಡಲೇ ವಿದ್ಯುತ್ ಪರಿವರ್ತಕ ಬದಲಾಯಿಸಬೇಕು. ಇಲ್ಲದಿದ್ದಲ್ಲಿ ಕಚೇರಿ ಎದುರು ಆಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಸಿದರು.
ರೈತ ಮುಖಂಡ ಅಣ್ಣಾಯಕನಹಳ್ಳಿ ಶಿವಮೂರ್ತಿ ಮಾತನಾಡಿ, ವಿದ್ಯುತ್ ಅಭಾವದಿಂದ ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಜನ ಹಾಗೂ ಜಾನುವಾರುಗಳು ಕುಡಿಯುವ ನೀರಿಗಾಗಿ ಹಾಹಾಕಾರ ಪಡುವಂತಹ ಸನ್ನಿವೇಶ ನಿರ್ಮಾಣಗೊಂಡಿದೆ.
 ಸಮಸ್ಯೆಯ ಅರಿವಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ. ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ರೈತರ ಪ್ರತಿಭಟನೆಗೆ ಮಣಿದ ಇಲಾಖೆಯ ಅಧಿಕಾರಿಗಳು ಪರಿವರ್ತಕ ಅಳವಡಿಸಲು ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಯಿತು. ರೈತ ಮುಖಂಡ ಕನಕಂಚೇನಹಳ್ಳಿ ಪ್ರಸನ್ನಕುಮಾರ್, ಜವನಹಳ್ಳಿ ನಿಂಗಪ್ಪ ಹಾಗೂ ರೈತ ಮುಖಂಡರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments