ವೈಷಮ್ಯ ಹಿನ್ನೆಲೆ ಹಲ್ಲೆ; ವ್ಯಕ್ತಿಗೆ ಗಾಯ
ಕ.ಪ್ರ.ವಾರ್ತೆ, ಕಿಕ್ಕೇರಿ, ಮಾ.26:
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಣಾತಿಂಕ ಹಲ್ಲೆ ನಡೆಸಿರುವ ಘಟನೆ ಹೋಬಳಿಯ ಮಾರ್ಗೋನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಮಾರ್ಗೋನಹಳ್ಳಿ ಗ್ರಾಮದ ನಿವಾಸಿ ಮಂಜೇಗೌಡ(33) ಎಂಬ ವ್ಯಕ್ತಿಯೇ ಹಲ್ಲೆಗೊಳಗಾಗಿರುವುದು. ಮಂಜೇಗೌಡ ತಮ್ಮ ಮಕ್ಕಳನ್ನು ಸಮೀಪದ ಅನ್ನಪೂರ್ಣೇಶ್ವರಿ ಶಾಲೆಗೆ ಬಿಟ್ಟು ಗ್ರಾಮಕ್ಕೆ ವಾಪಸ್ಸು ಹೋಗುತ್ತಿದ್ದಾಗ ಈ ಘಟನೆ ಜರುಗಿದೆ. ಮಂಜೇಗೌಡ ಗ್ರಾಮಕ್ಕೆ ಹೋಗುತ್ತಿರುವುದನ್ನು ಅರಿತ ಅದೇ ಗ್ರಾಮದ ಶಿವಣ್ಣ, ರವಿ, ಗಿರೀಶ, ನಾಗೇಶ , ಕರಿಕಾಳೇಗೌಡ, ಸಣ್ಣೇಗೌಡ ಎಂಬವರು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.
ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಂಜೇಗೌಡರನ್ನು ಗ್ರಾಮದ ಹಲವು ವ್ಯಕ್ತಿಗಳು ಹೆಚ್ಚಿನ ಚಿಕಿತ್ಸೆಗೆ ಚನ್ನರಾಯಪಟ್ಟಣದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳೀಯ ಉಪ ನಿರೀಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.