ಹಾಸನ

ಸೌಹಾರ್ದತೆಯಿಂದ ಶಾಂತಿ, ನೆಮ್ಮದಿ: ಡಾ. ಜಯರಾಜ್

ಕ.ಪ್ರ.ವಾರ್ತೆ೤ ಆಲೂರು೤ ಮಾ. 29
ಎಲ್ಲಾ ಧರ್ಮದವರು ಸೌಹಾರ್ಧತೆ ಕಾಪಾಡಿ ಕೊಂಡರೆ ಶಾಂತಿ ನೆಲೆಸುತ್ತದೆ. ಹಾಗೂ ಎಲ್ಲರೂ ಸಮಾನತೆಯಿಂದ ಬಾಳಬಹುದೆಂದು ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಇ. ಜಯರಾಜ್ ಹೇಳಿದರು.
ತಾಲೂಕಿನ ಕದಾಳು ಗ್ರಾಮದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಸಮಾಜದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರಿ ಸಂಸ್ಥೆ ಮೀನ ಪ್ರಾಸ್ತಾವಿಕವಾಗಿ ಮಾತನಾಡಿ, ಸದಾಕಾಲ ಸದ್ಗುಣಗಳು ಜಾಗೃತವಾಗಿರ ಬೇಕು. ಬಾಹ್ಯವಾಗಿ ನೆರವೇರಿಸುವ ಪೂಜೆ ಪುನಸ್ಕಾರಗಳು ಸದಾ ಸನ್ಮಾರ್ಗದಲ್ಲಿ ನಡೆಯುವುದೇ ಸದಾಚಾರವೆಂದ ಅವರು ಪ್ರಪಂಚದ ಮೂಲೆ ಮೂಲೆಗಳಲ್ಲಿ ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರಿ ಸಂಸ್ಥೆ ತನ್ನದೇ ಆದ ಹೊಣೆ ಹೊತ್ತು ಕರ್ತವ್ಯದಲ್ಲಿ ತೊಡಗಿವೆ ಎಂದು ತಿಳಿಸಿದರು. ಬಿ.ಕೆ.ರಾಜಣ್ಣ, ಜಿಪಂ ಮಾಜಿ ಸದಸ್ಯ ಸುಬ್ಬಶೆಟ್ಟಿ ಮಾತನಾಡಿದರು. ಗ್ರಾಮದ ಮುಖಂಡರು, ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ರಂಗಪ್ಪಣ್ಣ ಸ್ವಾಗತಿಸಿದರು. ಪುಷ್ಪ ವಂದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ