ಅರಕಲಗೂಡು: ಹಿರಿಯ ಬಿಜೆಪಿ ಮುಖಂಡ ಬಿ.ಬಿ. ಶಿವಪ್ಪ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮಕರಣ ಮಾಡಿದಕ್ಕೆ ಅರಕಲಗೂಡು ಕ್ಷೇತ್ರ ಬಿಜೆಪಿ ಅಧ್ಯಕ್ಷ ವಕೀಲ ಎಂ.ಕೆ. ನಟರಾಜ್ ಹಾಗೂ ಬಿಜೆಪಿ ಮುಖಂಡ ಪಿ.ಟಿ.ಕೇಶವೇಗೌಡ ಸಂತೋಷ ವ್ಯಕ್ತಪಡಿಸಿದ್ದಾರೆ. ಸುಮಾರು 40 ವರ್ಷಗಳಿಂದ ಶಿವಪ್ಪ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರನ್ನು ಸರಕಾರ ವಿಧಾನ ಪರಿಷತ್ ಸದಸ್ಯರಾಗಿ ನಾಮಕರಣ ಮಾಡಿರುವದರಿಂದ ಪಕ್ಷಕ್ಕೆ ಹೆಚ್ಚಿನ ಬಲ ಬಂದಂತಾಗಿದೆ. ಮುಂದಿನ ದಿವಸಗಳಲ್ಲಿ ಪಕ್ಷ ಉನ್ನತವಾಗಿ ಬೆಳೆಯಲು ಸಹಕಾರಿಯಾಗಲಿದೆ ಎಂದರು.