ವಾಲಿಬಾಲ್: ಉದಯಪುರ ಕಾಲೇಜು ಪ್ರಥಮ ಸ್ಥಾನ
ಚನ್ನರಾಯಪಟ್ಟಣ: ಹಾಸನದ ಕಲಾ ಕಾಲೇಜು ಆವರಣದಲ್ಲಿ ನಡೆದ ಮೈಸೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ತಾಲೂಕಿನ ಉದಯಪುರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಹಾಸನದ ಎನ್ಡಿಆರ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಮಣಿಸಿದ ತಾಲೂಕಿನ ಉದಯಪುರ ಕಾಲೇಜು ವಿದ್ಯಾರ್ಥಿಗಳು ತಾಲೂಕಿಗೆ ಮೆರಗು ತಂದಿದ್ದಾರೆ.
ಕ್ರೀಡೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಜಂಟಿ ನಿರ್ದೇಶಕ ನಟರಾಜು ಬಹುಮಾನ ವಿತರಿಸಿ ಮಾತನಾಡಿ ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಕ್ರೀಡೆಯೂ ಒಂದು ಅವಿಭಾಜ್ಯ ಅಂಗವಾಗಿದ್ದು, ಪಠ್ಯ ಚಟುವಟಿಕೆಗಳು ಎಷ್ಟು ಮುಖ್ಯವೋ, ಪಠ್ಯೇತರ ಚಟುವಟಿಕೆಗಳೂ ಅಷ್ಟೇ ಮುಖ್ಯವಾಗಿವೆ ಎಂದರು. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಹಾಗೂ ದೈಹಿಕ ನಿರ್ದೇಶಕ ಪ್ರಕಾಶ್ಕುಮಾರ್ ಅವರನ್ನು ಸನ್ಮಾನಿಸಲಾಯಿತು.