ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಶೆಟ್ಟಿಗೆರೆ ಗ್ರಾಮದಲ್ಲಿ ಮುಸುಕಿನ ಜೋಳ ಕ್ಷೇತ್ರೋತ್ಸವ

Mainashree
Updated On : 3 Nov 2013, 10:58 am

ಬೇಲೂರು: ಕಂದಲಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ತಾಲೂಕಿನ ಶೆಟ್ಟಿಗೆರೆ ಗ್ರಾಮದಲ್ಲಿ ಇತ್ತೀಚೆಗೆ ಹೈಬ್ರಿಡ್ ಮುಸುಕಿನ ಜೋಳ(ಹೇಮ)ದಲ್ಲಿ ಸಮಗ್ರ ಬೆಳೆ ನಿರ್ವಹಣೆ ಕ್ಷೇತ್ರೋತ್ಸವ ನಡೆಯಿತು.
ಕೇಂದ್ರದ ಮುಖ್ಯಸ್ಥ ಡಾ.ಬಿ.ಎಸ್.ಬಸವರಾಜು ಅಧ್ಯಕ್ಷತೆ ವಹಿಸಿದ್ದು, ರೈತರು ಮುಸುಕಿನ ಜೋಳದಲ್ಲಿ ಸಮಗ್ರ ಬೆಳೆ ನಿರ್ವಹಣೆ ಪದ್ಧತಿ ಅನುಸರಿಸುವುದರಿಂದ ಗುಣಮಟ್ಟದ ಇಳುವರಿ ಹಾಗೂ ಲಾಭ ಪಡೆಯಬಹುದು ಎಂದು ತಿಳಿಸಿದರು.
ರೈತರು ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳೊಂದಿಗೆ ನಿರಂತರ ಸಂಪರ್ಕ ಹೊಂದಿ ಹೆಚ್ಚಿನ ಮಾಹಿತಿ ಪಡೆಯಲು ಸಲಹೆ ನೀಡಿದರು. ಕೃಷಿ ಅಧಿಕಾರಿ ಜಯರಾಂ ಮಾತನಾಡಿ, ರೈತರು ಸಂಪರ್ಕ ಕೇಂದ್ರಕ್ಕೆ ಭೇಟಿ ಕೊಟ್ಟು ಇಲಾಖೆಯ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯುವಂತೆ ಹಾಗೂ ಭೂಚೇತನ ಯೋಜನೆಯಲ್ಲಿ ದೊರೆಯುವ ಲಘು ಪೋಷಕಾಂಶ ಬಳಕೆ ಮಾಡಿ ಅಧಿಕ ಮತ್ತು ಉತ್ತಮ ಇಳುವರಿ ಪಡೆಯಲು ಸಲಹೆ ನೀಡಿದರು.
ಮಣ್ಣು ವಿಜ್ಞಾನಿ ಡಾ ಚನ್ನಕೇಶವ ಮಾತನಾಡಿ, ರೈತರು ಸಮಗ್ರ ಪೋಷಕಾಂಶಗಳ ನಿರ್ವಹಣೆ ಮತ್ತು ಮಣ್ಣು ಪರೀಕ್ಷೆ ಆಧಾರಿತ ರಸಗೊಬ್ಬರಗಳ ಬಳಕೆ ಮಾಡುವುದರಿಂದ ಮಣ್ಣಿನ ಆರೋಗ್ಯ ಕಾಪಾಡುವುದರ ಜತೆಗೆ ರಾಸಾಯನಿಕ ಗೊಬ್ಬರಗಳ ಬಳಕೆ ಪ್ರಮಾಣ ಮತ್ತು ಖರ್ಚನ್ನು ಕಡಿಮೆ ಮಾಡಬಹುದು ಹಾಗೂ ಅಧಿಕ ಇಳುವರಿ ಪಡೆಯಬಹುದು (30 ರಿಂದ 35 ಕ್ವಿಂಟಾಲ್ ಪ್ರತಿ ಎಕರೆಗೆ) ಎಂದು ತಿಳಿಸಿದರು.  ಶೆಟ್ಟಿಗೆರೆ ಗ್ರಾಮಸ್ಥರು, ರೈತ ಮಹಿಳೆಯರು ಹಾಗೂ ಗ್ರಾಮದ ಶಾಲೆ ಶಿಕ್ಷಕ ವೃಂದದವರು ಇದ್ದರು. ವಿಷಯ ತಜ್ಞೆ ಡಾ. ಪಂಕಜ ನಿರೂಪಿಸಿದರು. ಡಾ ಟಿ.ಎಸ್. ಮಂಜುನಾಥಸ್ವಾಮಿ ಸ್ವಾಗತಿಸಿದರು. ಡಾ. ಕೃಷ್ಣಾರೆಡ್ಡಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement