ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ತಾಂತ್ರಿಕತೆಯಿಂದ ಕಡಿಮೆ ವೆಚ್ಚದಲ್ಲಿ ಹೆಚ್ಚು ಆಹಾರ ಉತ್ಪಾದನೆ'

Rashmi Kasaragodu
Updated On : 5 Nov 2013, 12:16 pm

ಸಕಲೇಶಪುರ: ಕೃಷಿಯಲ್ಲಿ ಹೊಸ ಹೊಸ ತಾಂತ್ರಿಕತೆ ಅಳವಡಿಕೆಯಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆಹಾರ ಉತ್ಪಾದನೆ ಸಾಧ್ಯ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು.
 ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಜನಪ್ರತಿನಿಧಿಗಳಿಗೆ ಇಲಾಖಾ ಯೋಜನೆಗಳನ್ನು ಪರಿಚಯಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
 ಇಲಾಖೆಯಿಂದ ಸಹಾಯಧನದಲ್ಲಿ ದೊರೆಯುವ ಪರಿಕರ ಮತ್ತು ಯಂತ್ರೋಪಕರಣ ಗಳನ್ನು ರೈತರು ಉಪಯೋಗಿಸಿಕೊಂಡು ಬೇಸಾಯದ ಖರ್ಚು ಕಡಿಮೆ ಮಾಡುವುದರ ಜತೆಗೆ ಕೃಷಿ ಆದಾಯವನ್ನು ಹೆಚ್ಚಿಸಿಕೊಳ್ಳವುದು ಅತೀ ಮುಖ್ಯವಾಗಿದೆ. ಇದಕ್ಕೆ ಅಧಿಕಾರಿಗಳ ಜೊತೆಗೆ ಜನಪ್ರತಿನಿಧಿಗಳು ಈ ಎಲ್ಲಾ ಸವಲತ್ತುಗಳ ಮಾಹಿತಿಯನ್ನು ಅರ್ಹ ರೈತರಿಗೆ ತಲುಪಿಸುವ ಕಾರ್ಯ ನಿರ್ವಹಿಸಬೇಕೆಂದು ಕರೆ ನೀಡಿದರು.
 ಜಿಪಂ ಮಾಜಿ  ಅಧ್ಯಕ್ಷೆ ಸುಲೋಚನಾ ಮಾತನಾಡಿ,  ರೈತರು ಹೊಸ ಪ್ರಯೋಗಗಳನ್ನು ಮಾಡುವ ಮೂಲಕ ಕೃಷಿಯಲ್ಲಿ ಹೆಚ್ಚಿನ ಇಳುವರಿ ಪಡೆಯುವುದರ ಜೊತೆಗೆ ಮಕ್ಕಳಲ್ಲಿ ವ್ಯವಸಾಯದ ಬಗ್ಗೆ ಉತ್ಸಾಹ ಮೂಡಿಸುವುದು ಅತೀ ಮುಖ್ಯವಾಗಿದೆ ಎಂದರು.
 ತಾಲೂಕು ಪಂಚಾಯ್ತಿ  ಅಧ್ಯಕ್ಷೆ ಮಂಜುಳ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ವೇದಾವತಿ, ಮಂಜಮ್ಮ, ಪುರಸಭೆ ಅಧ್ಯಕ್ಷ ಸತೀಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement