ನರೇಂದ್ರಮೋದಿ ಸಮಾವೇಶ: ಪ್ರತಿನಿಧಿ ಕೂಪನ್ ವಿತರಣೆ
ಕ.ಪ್ರ. ವಾರ್ತೆ ಹಾಸನ ನ. 4
ತಾಲೂಕು ಭಾರತೀಯ ಜನತಾ ಪಾರ್ಟಿ ನರೇಂದ್ರ ಮೋದಿ ಅಭಿಮಾನಿಗಳ ಸಂಘದ ವತಿಯಿಂದ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನಾಗರಿಕರಿಗೆ 10 ರು. ಪ್ರತಿನಿಧಿ ಶುಲ್ಕದ ಕೂಪನ್ಗಳನ್ನು ತಾಲೂಕಿನ ದೊಡ್ಡಪುರ ಗ್ರಾಮದ ಈಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ವಿತರಿಸಲಾಯಿತು.
ಬೆಂಗಳೂರಿನಲ್ಲಿ ನ.17ರಂದು ಭಾನುವಾರ ಬೆಳಗ್ಗೆ 11 ಕ್ಕೆ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಇದಕ್ಕೆ ದೊಡ್ಡಪುರ ಗ್ರಾಮಸ್ಥರು ಉತ್ಸಾಹದಿಂದ ಕೂಪನ್ಗಳನ್ನು ಪಡೆದು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶಕ್ಕೆ ಭಾಗವಹಿಸಲು ಉತ್ಸುಕತೆ ತೋರಿದರು.
ನರೇಂದ್ರ ಮೋದಿ ಅಭಿಮಾನಿ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಕೃಷ್ಣಸ್ವಾಮಿ, ಕಾರ್ಯಾಧ್ಯಕ್ಷ ಹಾಗೂ ಬಿಜೆಪಿ ಸದಸ್ಯ ಬಿ.ಕೆ.ಮಂಜುನಾಥ್, ತಾಲೂಕು ಅಧ್ಯಕ್ಷ ಕೆ.ಎ.ರಂಗಸ್ವಾಮಿ, ಬಿಜೆಪಿ ಮತ್ತು ನರೇಂದ್ರ ಮೋದಿ ಸಂಘದ ಪದಾಧಿಕಾರಿಗಳು ಸದಸ್ಯರು ಇದ್ದರು.