ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮುಖ್ಯಮಂತ್ರಿ ಮನೆ ಮುಂದೆ ಧರಣಿ ಹೇಳಿಕೆ ಹಾಸ್ಯಾಸ್ಪದ'

Rashmi Kasaragodu
Updated On : 5 Nov 2013, 12:14 pm

ಅರಸೀಕೆರೆ: ದಶಕಗಳ ಕಾಲ ಜಿಲ್ಲೆಯಲ್ಲಿ ರಾಜಕಾರಣ ಮಾಡಿರುವ ಮಾಜಿ ಪ್ರಧಾನಿ ದೇವೇಗೌಡರು ತಾವು ತಮ್ಮ ಮಕ್ಕಳು ಅಧಿಕಾರದಲ್ಲಿದ್ದಾಗ ಜಿಲ್ಲೆಯನ್ನು ಸರ್ವತೋಮುಖವಾಗಿ ಅಭಿವೃದ್ಧಿಪಡಿಸಲು ಸಾಧ್ಯವಾಗದೆ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆ ಮುಂದೆ ಧರಣಿ ನಡೆಸುವುದಾಗಿ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ ಸಂಗತಿ ಎಂದು ಹಿಂದುಳಿದ ವರ್ಗಗಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಟೇಲ್ ಶಿವಪ್ಪ ಟೀಕಿಸಿದ್ದಾರೆ.
ಅತ್ಯುನ್ನತ ಪ್ರಧಾನಮಂತ್ರಿ ಹುದ್ದೆಯನ್ನು ಅಲಂಕರಿಸಿ, ರಾಜ್ಯದ ಮುಖ್ಯಮಂತ್ರಿ, ಸಂಸದರಾಗಿ, ಜಿಲ್ಲೆಯನ್ನು ಪ್ರಗತಿಪಥದಲ್ಲಿ ಕೊಂಡೊಯ್ಯಲು ವಿಫಲರಾಗಿರುವ ದೇವೇಗೌಡರು ತಮ್ಮ ಮಕ್ಕಳ ಅವಧಿಯಲ್ಲಿ ಏಕೆ ಜಿಲ್ಲೆಗೆ ಅನುದಾನ ಒದಗಿಸಲಿಲ್ಲ. ಮುಖ್ಯಮಂತ್ರಿ ಗಾದಿಗೆ ಬಂದ ಸಿದ್ದರಾಮಯ್ಯ ಕೇವಲ ನಾಲ್ಕೈದು ತಿಂಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನರಿಯದ ಮಾಜಿ ಪ್ರಧಾನಿ ಮುಖ್ಯಮಂತ್ರಿ ನಿವಾಸದ ಮುಂದೆ ಧರಣಿ ಮಾಡುವುದಾಗಿ ಹೇಳಿರುವುದು ಮೂರ್ಖತನದ ಪರಮಾವಧಿಯಾಗಿದೆ ಎಂದು ಲೇವಡಿ ಮಾಡಿದ ಶಿವಪ್ಪ, ಅನುಕೂಲಸಿಂಧು ರಾಜಕಾರಣಿಗಳು ಎಂಬ ಹಣೆಪಟ್ಟಿ ಹೊತ್ತಿರುವ ಇಂತಹವರಿಂದ ಅಭಿವೃದ್ಧಿ ಬಗ್ಗೆ ಪಾಠ ಕಲಿಯಬೇಕಿಲ್ಲ. ದೇವೇಗೌಡರು ಸಿದ್ದರಾಮಯ್ಯ ನಿವಾಸ ಮುಂದೆ ಧರಣಿಗೆ ಮುಂದಾದರೆ ತಾವು ಕೂಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಾವಿರಾರು ಕಾರ್ಯಕರ್ತರೊಂದಿಗೆ ದೇವೇಗೌಡರ ನಿವಾಸದ ಮುಂದೆ ಪ್ರತಿ ಧರಣಿ ನಡೆಸುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement