ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವಲ್ಲಭಬಾಯಿ ಪಟೇಲ್ ಭಾರತದ ಬಿಸ್ಮಾರ್ಕ್'

Rashmi Kasaragodu
Updated On : 5 Nov 2013, 12:15 pm

ಜಾವಗಲ್: ಅಖಂಡ ಭಾರತದ ಐಕ್ಯತೆಗಾಗಿ ಶ್ರಮಿಸಿದ ಧೀಮಂತ ವ್ಯಕ್ತಿ ಸರ್ದಾರ್ ವಲ್ಲಭಬಾಯಿ ಪಟೇಲ್ ಭಾರತದ ಬಿಸ್ಮಾರ್ಕ್ ಎನಿಸಿದ್ದರು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಶಿವಶಂಕರಮೂರ್ತಿ ಹೇಳಿದರು.
ಕಾಲೇಜಿನ ರಾಜ್ಯಶಾಸ್ತ್ರ ಮತ್ತು ಸಮಾಜಶಾಸ್ತ್ರ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪಟೇಲ್ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ ಪೂರ್ವ 500ಕ್ಕೂ ಹೆಚ್ಚು ಅರಸೊತ್ತಿಗೆಗಳಲ್ಲಿ ಹರಿದು ಹಂಚಿಹೋಗಿದ್ದ ಪ್ರಾಂತ್ಯಗಳನ್ನು ಒಗ್ಗೂಡಿಸಿ ಭಾರತದ ಐಕ್ಯತೆಗಾಗಿ ಭಾಷಾವಾರು ರಾಜ್ಯಗಳ ಪುನರ್ ವಿಂಗಡನೆ ಮಾಡಿದ ಧೀಮಂತವ್ಯಕ್ತಿ ಎಂದರು.
ಪಟೇಲ್ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ, ಪ್ರಥಮ ಗೃಹಮಂತ್ರಿಯಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿ ಉಕ್ಕಿನ ಮನುಷ್ಯ ಎಂಬ ಬಿರುದು ಪಡೆದಿದ್ದರು ಎಂದು ಹೇಳಿದರು. ಉಪನ್ಯಾಸಕ ಶಂಕರಲಿಂಗೇಗೌಡ, ಸತೀಶ್, ಪ್ರದೀಪ್ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಭಾಷಾ ಮಾತನಾಡಿ, ಜರ್ಮನಿ, ಕೆನಡಾ, ಆಸ್ಟ್ರೇಲಿಯಾ, ದೇಶಗಳಲ್ಲಿ ದೌರ್ಜನ್ಯ ಪ್ರಕರಣಗಳು ಶೇ 1 ಕಿಂತ ಕಡಿಮೆ ಇದೆ. ಆದರೆ ಭಾರತದಲ್ಲಿ ಬಡತನ, ಅಪೌಷ್ಟಿಕತೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದ್ದು ಇದರ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಯುವಜತೆಯ ಜವಾಬ್ದಾರಿ ಅಗತ್ಯವಾಗಿದೆ ಎಂದು ನುಡಿದರು. ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement