ಶೀಘ್ರ ಅಂಬೇಡ್ಕರ್ ಭವನ ಪೂರ್ಣ
ಸಕಲೇಶಪುರ: ಪಟ್ಟಣದ ಅಂಬೇಡ್ಕರ್ ಭವನ ಕಾಮಗಾರಿ ಶೀಘ್ರ ಮುಕ್ತಾಯಗೊಳ್ಳಲಿದೆ ಎಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದರು. ಇಲ್ಲಿನ ಕುಶಾಲನಗರ ಬಡಾವಣೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನ ಕಾಮಗಾರಿ ವೀಕ್ಷಿಸಿ, ಗುತ್ತಿಗೆದಾರರಿಗೆ 20 ಲಕ್ಷ ರು. ಬಾಕಿ ಇರುವ ಕಾರಣ ಕಾಮಗಾರಿ ವಿಳಂಬವಾಗಿದೆ ಎಂದರು.