ಸರ್ಕಾರಿ ಶಾಲೆಯಲ್ಲಿ ರಾಜ್ಯೋತ್ಸವ
ಹಾಸನ: ತಾಲೂಕಿನ ಮಣಚನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಸನಾಂಬ ಲಯನ್ಸ್ ಕ್ಲಬ್, ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಹಾಗೂ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ಎಸ್ಡಿಎಂಸಿ ಹಾಗೂ ಕ್ಲಬ್ ಸದಸ್ಯರು, ಶಿಕ್ಷಕರು ಮಕ್ಕಳೊಂದಿಗೆ ಪಥ ಸಂಚಲನ ನಡೆಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಮಂಜೇಗೌಡ ಮಾತನಾಡಿ, ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವಂತೆ ಪೋಷಕರಿಗೆ ಕಿವಿಮಾತು ಹೇಳಿದರು. ಹಾಸನಾಂಬ ಲಯನ್ಸ್ ಕ್ಲಬ್ ಕೋಶಾಧ್ಯಕ್ಷ ಮಾತನಾಡಿ, ಪರಭಾಷಾ ವ್ಯಾಮೋಹ ಬಿಟ್ಟು ಕನ್ನಡನಾಡಿನ ನೆಲಜಲ ಸಂಪತ್ತನ್ನು ರಕ್ಷಿಸಲು ಪ್ರತಿಯೊಬ್ಬ ಕನ್ನಡಿಗನೂ ದೃಢನಿರ್ಧಾರ ಮಾಡಬೇಕೆಂದರು. ಮುಖ್ಯ ಶಿಕ್ಷಕರು ಹೆಣ್ಣುಮಕ್ಕಳ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಎಸ್ಡಿಎಂಸಿ ಸದಸ್ಯರು, ಗ್ರಾಮಸ್ಥರು, ಶಿಕ್ಷಕರು ಇದ್ದರು. ವರಮಹಾಲಕ್ಷ್ಮಿ ವಂದಿಸಿದರು.