ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

29ರಂದು ಕನ್ನಡ ರಾಜ್ಯೋತ್ಸವ

Rashmi Kasaragodu
Updated On : 8 Nov 2013, 12:16 pm

ಚನ್ನರಾಯಪಟ್ಟಣ: ತಾಲೂಕು ಕನ್ನಡ ಪರಿಷತ್ ವತಿಯಿಂದ ನ.29ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಣೆ ನಡೆಸಲು ತೀರ್ಮಾನಿಸಲಾಯಿತು.  ಮಿನಿವಿಧಾನ ಸೌಧದಲ್ಲಿ ತಹಸೀಲ್ದಾರ್ ಡಾ. ನಾಗರಾಜ್ ಅಧ್ಯಕ್ಷತೆಯಲ್ಲಿ  ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ನ.29ರಂದು ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನೆರವೇರಿಸಲು ತೀರ್ಮಾನಿಸಲಾಯಿತು.  ರಾಜ್ಯೋತ್ಸವದ ಅಂಗವಾಗಿ ಆಡಳಿತದಲ್ಲಿ ಕನ್ನಡ ಬಳಕೆಯಾದರೆ ಕರ್ನಾಟಕ ಅಭಿವೃದ್ಧಿ ಸಾಧ್ಯ ಎಂಬ ವಿಚಾರವಾಗಿ ನ9ರಂದು ಪಟ್ಟಣದ ನವೋದಯ ಕಾಲೇಜು ಆವರಣದಲ್ಲಿ ಚರ್ಚಾಸ್ಪರ್ಧೆ ಹಾಗೂ 16ರಂದು ಕನ್ನಡ ಭಾಷೆಯ ಅಭಿವೃದ್ಧಿ ಕುರಿತು ಪ್ರಬಂದ ಸ್ಪರ್ಧೆ ಏರ್ಪಡಿಸಲು ತೀರ್ಮಾನಿಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಪದವಿ ಶಿಕ್ಷಣದಲ್ಲಿ  ಕನ್ನಡ ವಿಷಯದಲ್ಲಿ ಶೇ.100ರಷ್ಟು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸುವುದು. ರಾಜ್ಯ  ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ ಹಾಗೂ ನಿಕಟಪೂರ್ವ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್, ಕನ್ನಡದಲ್ಲಿ ತೀರ್ಪು ನೀಡಿದ ನ್ಯಾಯಾಧೀಶರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು.  ತಾಲೂಕು ಕಸಾಪ ವತಿಯಿಂದ ಆಯೋಜಿಸಿದ್ದ ಪ್ರಥಮ ಹಾಗೂ ದ್ವಿತೀಯ ಸಮ್ಮೇಳನದ ಎರಡು  ಸ್ಮರಣ ಸಂಚಿಕೆ ಬಿಡುಗಡೆ ಮಾಡಲು ತೀರ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement