ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿ
ಹಾಸನ: ನಗರದ ಅಭಿವೃದ್ಧಿಗಾಗಿ ಹಣ ಬಿಡುಗಡೆ ಮಾಡಿಸುವಂತೆ ನಗರಸಭೆ ಅಧ್ಯಕ್ಷೆ ಶ್ರೀವಿದ್ಯಾ ನೇತೃತ್ವದಲ್ಲಿ ನಗರಸಭೆ ಸದಸ್ಯರು ಗುರುವಾರ ಮಾಜಿ ಪ್ರಧಾನಿ ಹಾಗೂ ಸಂಸದ ಎಚ್.ಡಿ. ದೇವೇಗೌಡರಿಗೆ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಗೌಡರು, ರಾಜ್ಯ ಸರ್ಕಾರ ಹಣ ಬಿಡುಗಡೆಗೊಳಿಸದಿದ್ದರೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆ ಮುಂದೆ ಧರಣಿ ನಡೆಸುವುದಾಗಿ ಎಚ್ಚರಿಸಿದರು. ನಗರಸಭೆ ಮಾಜಿ ಅಧ್ಯಕ್ಷ ಸಿ.ಆರ್. ಶಂಕರ್, ನಗರಸಭೆ ಸದಸ್ಯರಾದ ಗೋಪಾಲ್, ವಿಜಯಕುಮಾರ್, ಭಾನುಪ್ರಕಾಶ್, ಗೋಪಾಲ್, ಲೀಲಾ ವಾಸು, ಶುಭ ಇತರರು ಇದ್ದರು.