ಇಂದು ಗುರುವಂದನಾ ಕಾರ್ಯಕ್ರಮ
ಹೊಳೆನರಸೀಪುರ: ತಾಲೂಕಿನ ತಾತನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಶಾಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮವನ್ನು ನ.8 ರಂದು ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ವರ್ಗ ತಿಳಿಸಿದೆ. ಕಾರ್ಯಕ್ರಮವನ್ನು ತಹಸೀಲ್ದಾರ್ ಆರ್.ಬಿ. ಶಿವಶಂಕರಪ್ಪ ಅವರು ಉದ್ಘಾಟಿಸಲಿದ್ದು, ಪ್ರಧಾನ ಭಾಷಣಕಾರರಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್.ಎಸ್. ಪುಟ್ಟಸೋಮಪ್ಪ ಮಾತನಾಡಲಿದ್ದಾರೆ.