ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ದೇಗುಲಗಳ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳಿಸಲು ಆಗ್ರಹ

Rashmi Kasaragodu
Updated On : 8 Nov 2013, 12:14 pm

ಹಾಸನ: ನಗರದ ಹಾಸನಾಂಬ ದೇವಸ್ಥಾನದ ಗೋಪುರ  ಉದ್ಘಾಟನೆ ಹಾಗೂ ದೇವಸ್ಥಾನದ ಕಳಸಾರೋಹಣ ಮತ್ತು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಯನ್ನು ಶೀಘ್ರದಲ್ಲಿಯೇ ಮುಗಿಸಿ ಉದ್ಘಾಟನೆ ಮಾಡಬೇಕು.   ದೇವಸ್ಥಾನದ ಅಭಿವೃದ್ಧಿ ಸಮಿತಿಯನ್ನು ಸ್ಥಳೀಯ ಪ್ರಮುಖರನ್ನು ಒಳಗೊಂಡಂತೆ ರಚಿಸಬೇಕು ಎಂದು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಹಾಸನಾಂಬ ದೇವಸ್ಥನಾದ ಕಾಣಿಕೆ ಹುಂಡಿಯಿಂದ ಬಂದಿರುವ ಹಣವನ್ನು ಹಾಸನಾಂಬ ದೇವಸ್ಥಾನದ ಅಭಿವೃದ್ಧಿಗೆ ಬಳಸಿಕೊಳ್ಳುವುದಾಗಿ ತಿಳಿಸಿರುವ ಜಿಲ್ಲಾಧಿಕಾರಿಗೆ ಹೇಳಿಕೆಯನ್ನು ಪರಿಷತ್ ಸ್ವಾಗತಿಸುತ್ತದೆ ಎಂದು ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್ ತಿಳಿಸಿದ್ದಾರೆ. ಜಿಲ್ಲಾಡಳಿತವು ಈ ಸಾರಿ ಹಾಸನಾಂಬ ದೇವಿಯ ದರ್ಶನಕ್ಕೆ ಬಂದ ಭಕ್ತರಿಗೆ ಉತ್ತಮ ವ್ಯವಸ್ಥೆ ಮಾಡಿದ್ದರೂ ಇನ್ನೂ ಕೆಲವು ವ್ಯವಸ್ಥೆಗಳನ್ನು ಮಾಡಬೇಕಾಗಿದೆ ಎಂದು ಹೇಳಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳ ಲಕ್ಷಾಂತರ  ಭಕ್ತರಿಗೆ ಊಟ, ತಿಂಡಿ ವ್ಯವಸ್ಥೆ ಕಲ್ಪಿಸುವುದು ಶೌಚಾಲಯ ನಿರ್ಮಾಣ ಮಾಡುವುದು ಹಾಗೂ ದೇವಸ್ಥಾನದ ಜಾಗದಲ್ಲಿರುವ ಮನೆಗಳನ್ನು ತೆರವುಗೊಳಿಸುವುದು, ಅಭಿವೃದ್ಧಿ ಕಾರ್ಯಗಳನ್ನು ಜಿಲ್ಲಾಡಳಿತವು ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement