ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪತ್ರಿಕೋದ್ಯಮ ನಿರತರಿಗೆ ಧೈರ್ಯ ಬೇಕು: ಪರ್ತಕರ್ತೆ ವಾಸಂತಿ

Rashmi Kasaragodu
Updated On : 9 Nov 2013, 12:03 pm

ಕನ್ನಡಪ್ರಭ ವಾರ್ತೆ೤ ಹಾಸನ೤ ನ.8
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಆತ್ಮಬಲ ಹಾಗೂ ಧೈರ್ಯವಿರಬೇಕು. ಜೊತೆಗೆ ಒಂದು ಸುದ್ದಿಯನ್ನು ಹಲವು ದೃಷ್ಟಿಕೋನದಲ್ಲಿ ಆಲೋಚಿಸುವ ಗುಣವನ್ನು ಮೈಗೂಡಿಸಿಕೊಳ್ಳಬೇಕು ಎಂದು ಪತ್ರಕರ್ತೆ ವಾಸಂತಿ ಹರಿಪ್ರಕಾಶ್ ತಿಳಿಸಿದರು.
ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿಭಾಗ, ವರದಿಗಾರರ ಕೂಟದ ಸಂಯುಕ್ತಾಶ್ರದಲ್ಲಿ ಶುಕ್ರವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಪತ್ರಿಕೋದ್ಯಮ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಅವಧಿಯಲ್ಲಿ ಪ್ರಶ್ನೆ ಕೇಳುವ ಗುಣವನ್ನು ರೂಢಿಸಿ ಕೊಳ್ಳಬೇಕು. ಸಮಾಜದ ಬಗ್ಗೆ ತಿಳಿದುಕೊಳ್ಳುವ ಮೂಲಕ ಜನರಿಗೆ ನೇರ ಸುದ್ದಿ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಹೇಳಿದರು.ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಪತ್ರಕರ್ತ ಆರ್.ಪಿ.ವೆಂಕಟೇಶಮೂರ್ತಿ ಮಾತನಾಡಿ, ಪತ್ರಕರ್ತರು ಆಳವಾದ ಅಧ್ಯಯನ ನಡೆಸುವ ಮೂಲಕ ಒಂದು ವಿಷಯವನ್ನು ವಿಶ್ಲೇಷಣೆ ಮಾಡುವ ಗುಣ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಪತ್ರಿಕೋದ್ಯಮ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳ ಅಧ್ಯಯನ ನಡೆಸುವ ಮೂಲಕ ಹೆಚ್ಚಿನ ವಿಷಯಗಳ ಬಗ್ಗೆ ಜ್ಞಾನ ಪಡೆದುಕೊಳ್ಳಬೇಕು. ಅಲ್ಲದೇ ಈ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವವರು ಸಮಾಜದ ಬಗ್ಗೆ ಕಾಳಜಿ ಪ್ರೀತಿಯನ್ನು ಮೈಗೂಡಿಸಿಕೊಳ್ಳಬೇಕು. ಇಂದು ಸಮಾಜ ಜಡ್ಡು ಗಟ್ಟಿದ್ದು, ಈ ನಿಟ್ಟಿನಲ್ಲಿ ಯುವ ಪತ್ರಿಕೋದ್ಯಮಿಗಳು ಕಾರ್ಯಪ್ರವೃತ್ತರಾಗುವ ಮೂಲಕ ಸಮಾಜದ ಬದಲಾವಣೆಗೆ ಶ್ರಮಿಸಬೇಕು ಎಂದು ನುಡಿದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟೇಶಮೂರ್ತಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಪ್ರಾಂಶುಪಾಲ ಪ್ರೊ. ಎಚ್.ಎನ್. ರೂಪ್ರಾಜ ಚಂದನ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಡಾ. ಎಂ.ಎನ್. ನಿರ್ವಾಣಿಗೌಡ, ಲೋಕಪ್ಪಗೌಡ, ಮಹೇಶ್, ಕುಸುಮ, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎ. ಪ್ರಕಾಶ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ದಿಲೀಪ್ಕುಮಾರ್, ಉಪನ್ಯಾಸಕ  ಕೆ.ಆರ್.ಸಂದೇಶ್ ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement