ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅರಸೀಕೆರೆಗೆ ವಿವೇಕಾನಂದ ರಥ ಆಗಮನ ನಾಳೆ

Rashmi Kasaragodu
Updated On : 9 Nov 2013, 11:52 am

ಅರಸೀಕೆರೆ: ಸ್ವಾಮಿ ವಿವೇಕಾನಂದರ 150ನೇ ಜನ್ಮಾಚರಣೆ ಅಂಗವಾಗಿ ದೇಶದಾದ್ಯಂತ ಹೊರಟಿರುವ ರಥಯಾತ್ರೆಯು ನ.11 ರಂದು  ಪಟ್ಟಣ  ಪ್ರವೇಶಿಸಲಿದ್ದು, ಪೂರ್ಣಕುಂಭ ಸ್ವಾಗತದೊಂದಿಗೆ ಅದ್ದೂರಿ ಮೆರವಣಿಗೆ ನಡೆಸಲಾಗುವುದು ಎಂದು ಸ್ವಾಗತ ಸಮಿತಿ ಅಧ್ಯಕ್ಷ ಕೆ.ಎಸ್.ಪ್ರಸನ್ನಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಶ್ರೀರಾಮಕೃಷ್ಣ ಮಠ ಮತ್ತು ಶ್ರೀರಾಮಕೃಷ್ಣ ಭಾವ ಪ್ರಚಾರ ಪರಿಷತ್ ಆಶ್ರಯದಲ್ಲಿ ಹೊರಟಿರುವ ಸ್ವಾಮಿ ವಿವೇಕಾನಂದರ ರಥಯಾತ್ರೆ ಮೂಲಕ ಅವರ ಆದರ್ಶ ತತ್ವಗಳನ್ನು ಇಂದಿನ ಯುವ ಜನಾಂಗಕ್ಕೆ ತಿಳಿಸುವ ಕಾರ್ಯದಲ್ಲಿ ಯುವಕರಲ್ಲಿ ಆತ್ಮ ವಿಶ್ವಾಸ, ರಾಷ್ಟ್ರ ಭಕ್ತಿ, ಕ್ರಿಯಾಶೀಲತೆ ಹಾಗೂ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸುವ ಉದ್ದೇಶದೊಡನೆ ನಿಯೋಜಿಸಲಾಗಿದೆ. ನ.11 ರಂದು ಸೋಮವಾರ ಬೆಳಿಗ್ಗೆ 9.30 ಕ್ಕೆ ಸರ್ಕಾರಿ ಜೆ.ಸಿ. ಆಸ್ಪತ್ರೆ ಆವರಣದಿಂದ ರಥಯಾತ್ರೆ ಆರಂಭಗೊಂಡು ಬಿ.ಎಚ್.ರಸ್ತೆಯ ಮೂಲಕ ಸಾಧನಾ ಚಿತ್ರಮಂದಿರ ತಲುಪಲಿದೆ. ತದ ನಂತರ ಸಾರ್ವಜನಿಕ ಗ್ರಂಥಾಲಯ ರಸ್ತೆಯಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾರ್ವಜನಿಕ ಸಭೆಯನ್ನು ಏರ್ಪಡಿಸಲಾಗಿದೆ. ಈ ಮಹತ್ವ ಪೂರ್ಣವಾದ ರಥಯಾತ್ರೆ ಕಾರ್ಯಕ್ರಮದಲ್ಲಿ ವಿವೇಕಾನಂದರ ವೇಷಭೂಷಣ ಧರಿಸಿ ಮೆರವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಅವಕಾಶವಿದ್ದು,  ಪಟ್ಟಣದ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಬ್ಯಾಂಡ್ಸೆಟ್ಗಳೊಂದಿಗೆ ಹಾಗೂ ನಾನಾ ಜನಪದ ಕಲಾತಂಡಗಳು  ಪಾಲ್ಗೊಳ್ಳಲು ಮನವಿ ಮಾಡಲಾಗಿದೆ. ಅಲ್ಲದೆ ವಿಶೇಷವಾಗಿ ಮಹಿಳೆಯರು ಮತ್ತು ಕಾಲೇಜು ವಿದ್ಯಾರ್ಥಿನಿಯರು ಪೂರ್ಣಕುಂಭದೊಡನೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದ್ದಾರೆ.  ಕಾರ್ಯಕ್ರಮದ ಸ್ಥಳದಲ್ಲಿ ಸ್ವಾಮಿ ವಿವೇಕಾನಂದರ ಪುಸ್ತಕಗಳು, ಸಿ.ಡಿ. ಭಾವಚಿತ್ರಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement