ಇಂದು ಯೋಧರ ಒಕ್ಕೂಟದ ಕಚೇರಿ ಉದ್ಘಾಟನೆ
ಹಾಸನ: ಜಿಲ್ಲಾ ನಿವೃತ್ತ ಅರೆಸೇನಾ ಪಡೆ ಯೋಧರ ಒಕ್ಕೂಟದ ನೂತನ ಕಚೇರಿ ಉದ್ಘಾಟನಾ ಸಮಾರಂಭ ನವೆಂಬರ್ 10 ರಂದು ಬೆಳಗ್ಗೆ 11 ಕ್ಕೆ ನಗರದ ಸಾಲಗಾಮೆ ರಸ್ತೆ, ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಇರುವ ವೆಂಕಟೇಶ್ವರ ಕಟ್ಟಡದಲ್ಲಿ ನಡೆಯಲಿದೆ. ಜಿಲ್ಲಾ ಎಸ್ಪಿ ರವಿ ಡಿ. ಚನ್ನಣ್ಣನವರ್ ಕಚೇರಿ ಉದ್ಘಾಟಿಸುವರು. ಎಂಸಿಎಫ್ಸಿಐಎಸ್ಎಫ್ ಉಪ ಕಮಾಂಡೆಂಟ್ ದಾಸ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಒಕ್ಕೂಟದ ಅಧ್ಯಕ್ಷ ಆರ್.ಎಂ. ಹನುಮಂತಪ್ಪ ಅಧ್ಯಕ್ಷತೆ ವಹಿಸುವರು. ಉಪಾಧ್ಯಕ್ಷ ಕೆಂಚೇಗೌಡ, ಕಾರ್ಯದರ್ಶಿ ಶ್ರೀನಿವಾಸ್ ಹಾಗೂ ಖಜಾಂಚಿ ಎಚ್.ಎಸ್. ರಮೇಶ್ ಉಪಸ್ಥಿತರಿರುವರು. ಅಂದು ಬೆಳಗ್ಗೆ 10 ಕ್ಕೆ ಪೂಜಾ ಕಾರ್ಯಕ್ರಮವಿದ್ದು, ಅರೆಸೇನಾ (ಬಿಎಸ್ಎಫ್, ಸಿಆರ್ಪಿಎಫ್, ಸಿಐಎಸ್ಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಅಸ್ಸಾಂ ರೈಫಲ್ಸ್ ಪಡೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಎಲ್ಲಾ ಮಾಜಿ ಯೋಧರು ಭಾಗವಹಿಸುವಂತೆ ಒಕ್ಕೂಟದ ಅಧ್ಯಕ್ಷ ಆರ್.ಎಂ. ಹನುಮಂತಪ್ಪ ಮನವಿ ಮಾಡಿದ್ದಾರೆ. ಮಾಹಿತಿಗೆ ದೂ: 9686811183 ಸಂಪರ್ಕಿಸಿ.