ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅರಕಲಗೂಡಿನಲ್ಲೂ ಪ್ರತಿಭಟನೆ

Rashmi Kasaragodu
Updated On : 11 Nov 2013, 12:23 pm

ಅರಕಲಗೂಡು: ರಾಜ್ಯ ಸರ್ಕಾರದ ಶಾದಿಭಾಗ್ಯ ಯೋಜನೆಯನ್ನು ಎಲ್ಲಾ ಜನಾಂಗದ ಬಡವರಿಗೂ ವಿಸ್ತರಿಸಬೇಕು ಮತ್ತು ಎಪಿಎಲ್ ಕಾರ್ಡ್ದಾರರಿಗೂ ಪಡಿತರ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಕೆಜೆಪಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ನಡೆಸುತ್ತಿರುವ ಧರಣಿ ಬೆಂಬಲಿಸಿ ಮತ್ತು ಸ್ಥಳೀಯ ಸಮಸ್ಯೆಗಳಾದ ಅರಕಲಗೂಡು-ಹಾಸನ ಅರಕಲಗೂಡು-ಪಿರಿಯಾಪಟ್ಟಣ ರಸ್ತೆ ದುರಸ್ಥಿಗೊಳಿಸಬೇಕು,ಅಪೂರ್ಣವಾಗಿರುವ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಮತ್ತು ಸೂಕ್ತ ನಿರ್ವಹಣೆ ಮಾಡಬೇಕು ಮತ್ತು ಕಟ್ಟೇಪುರ ನಾಲೆ ದುರಸ್ಥಿಯಲ್ಲಿ ಆಗಿರುವ ಕಳಪೆ ಕಾಮಗಾರಿಯ ತನಿಖೆ ನಡೆಸಬೇಕು ಮತ್ತು ತಾಲೂಕು ಕ್ರೀಡಾಂಣ ದುರಸ್ಥಿಗೆ ಒತ್ತಾಯಿಸಿ ಸೋಮವಾರ ಬೆಳಿಗ್ಗೆ 10.30ಕ್ಕೆ ಇಲ್ಲಿನ ಅ.ನ.ಕೃ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕರ್ತರು ಪಾಲ್ಗೊಳ್ಳಬೇಕೆಂದು ಮುಖಂಡ ಎನ್.ರವಿಕುಮಾರ್, ಚಂದ್ರಶೇಖರ್ ಮನವಿ ಮಾಡಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement