ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಆಯುಷ್‌ಶಾಲಾ ಆರೋಗ್ಯ ಕಾರ್ಯಕ್ರಮ ಉದ್ಘಾಟನೆ

Vishwanath S
Updated On : 16 Nov 2013, 12:43 pm

ಅರಕಲಗೂಡು: ದೇಶದ ಪ್ರಗತಿ ಅರೋಗ್ಯವಂತ ಪ್ರಜೆಗಳಿಂದ ಮಾತ್ರ ಸಾಧ್ಯ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಆದ್ದರಿಂದ ಮಕ್ಕಳ ಅರೋಗ್ಯ ಬಹು ಮುಖ್ಯ ಎಂದು ಇಲ್ಲಿಯ ಅಯುರ್ವೇದ ಅಸ್ಪತ್ರೆಯ ಡಾ. ಮೋಹನ್ ತಿಳಿಸಿದರು.
ರಾಮನಾಥಪುರ ಪಟ್ಟಾಭಿರಾಮ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಆಯುಷ್ ಶಾಲಾ ಆರೋಗ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಅರೋಗ್ಯ ಎಂದರೆ ಕೇವಲ ರೋಗರಹಿತನಾಗಿರುವುದಲ್ಲ. ಸಂಪೂರ್ಣ ದೈಹಿಕ, ಮಾನಸಿಕ ಹಾಗೂ ಸಾಮಾಜಿಕವಾಗಿ ಉತ್ತಮ ಸ್ಥಿತಿಯಲ್ಲಿರುವುದು. ಮಾನಸಿಕ ಒತ್ತಡದ ಕಾರಣದಿಂದಾಗಿ ಮನುಷ್ಯನಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಮೆದುಳಿನಲ್ಲಿ ರಾಸಾಯನಿಕ ವ್ಯತ್ಯಾಸಗಳಿಂದಾಗಿ ಭಾವನಾತ್ಮಕ ಬದಲಾವಣೆಗಳಾಗುವುದು. ಜಠರ, ಕರುಳಿನ ಅಸಹಜತೆಗಳು, ವಿಸರ್ಜನಾಂಗಗಳ ಕಾಯಿಲೆಯ  ರೂಪದಲ್ಲಿ ಕಾಣಿಸಿಕೊಳ್ಳಬಹುದು. ದೇಹದ ರೋಗ ಪ್ರತಿರೋಧಕ ಶಕ್ತಿ ಕುಂಠಿತವಾಗಬಹುದು ಎಂದರು.  ಮುಖ್ಯ ಶಿಕ್ಷಕ ಶಿವರಾಮೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement