ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮಕ್ಕಳಿಗೆ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟನೆ

Vishwanath S
Updated On : 16 Nov 2013, 12:42 pm

ಚನ್ನರಾಯಪಟ್ಟಣ: ದೇಶದಲ್ಲಿ ಅಪರಾಧ ಮೊಕದ್ದೊಮೆಗಳು ಹೆಚ್ಚುತ್ತಿದ್ದು, ಅದನ್ನು ಹೋಗಲಾಡಿಸಲು ವಿದ್ಯಾರ್ಥಿಗಳಿಗೆ ನೈತಿಕ ಹಾಗೂ ಮೌಲ್ಯಾಧಾರಿತ  ಶಿಕ್ಷಣ ಅತ್ಯಗತ್ಯವಾಗಿದೆ ಎಂದು ನ್ಯಾ. ಕೆ.ಮಹದೇವ್ ತಿಳಿಸಿದರು.
ಪಟ್ಟಣದ ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕಿಲರ ಸಂಘ  ಹಾಗೂ ಶಿಕ್ಷಣ ಇಲಾಖೆ ಸಂಯುಕ್ತದಲ್ಲಿ ಏರ್ಪಡಿಸಿದ್ದ ಮಕ್ಕಳಿಗೆ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪೋಷಕರು ಹಾಗೂ ಶಿಕ್ಷಕರು ಮಕ್ಕಳನ್ನು ಸಬಲೀಕರಣಗೊಳಿಸುವ ಜವಬ್ದಾರಿ ಹೊಂದಿದ್ದು, ಸಂವಿಧಾನಾತ್ಮಕವಾಗಿ ಮಕ್ಕಳಿಗೆ ಶಿಕ್ಷಣ ನೀಡುವುದು ಪೋಷಕರು ಹಾಗೂ ಶಿಕ್ಷಕರ ಕರ್ತವ್ಯವಾಗಿದೆ ಎಂದು ತಿಳಿಸಿದರು.  ಮಕ್ಕಳು ಬಾಲ್ಯಾವಸ್ಥೆಯಲ್ಲಿರುವಾಗಲೇ ಅವರಲ್ಲಿ ಯಾವುದಾದರೊಂದು ಪ್ರತಿಭೆಯಿದ್ದು, ಅದನ್ನು ಹೊರತರುವ ಜವಾಬ್ದಾರಿ ಜತೆಯಲ್ಲಿಯೇ ಮಕ್ಕಳಿಗೆ ಉತ್ತಮ ಸಂಸ್ಕಾರದ ಮೂಡಿಸುವ ಅರಿವಿನ ಜವಬ್ದಾರಿ ಕೂಡ ಇರುತ್ತದೆ ಎಂದು ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ ಪಾಂಡು, ಸರ್ಕಾರಿ ಸಹಾಯಕ ಅಭಿಯೋಜಕ ಮೃತ್ಯುಂಜಯ, ಎಸ್‌ಡಿಎಂಸಿ ಅಧ್ಯಕ್ಷ ದೇವರಾಜು, ವಕೀಲರಾದ ಕುಮಾರ್, ವೆಂಕಟರಮಣೇಗೌಡ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement