ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮೃತ ವ್ಯಕ್ತಿಯ ಕುಟುಂಬಕ್ಕೆ ಸರ್ಕಾರಿ ಹುದ್ದೆಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

Srinivasa Murthy VN
Updated On : 17 Nov 2013, 12:10 pm

ಸಕಲೇಶಪುರ: ಕಾಡಾನೆ ತುಳಿತದಿಂದ ಮೃತಪಟ್ಟ ರುದ್ರಯ್ಯನ ಕುಟುಂಬಕ್ಕೆ ಸರ್ಕಾರಿ ನೌಕರಿ ನೀಡಬೇಕೆಂದು ಒತ್ತಾಯಿಸಿ ಬಾಳ್ಳುಪೇಟೆಯಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಹಾಸನದಿಂದ ಮೃತದೇಹವನ್ನು ತಂದ ಸಂದರ್ಭದಲ್ಲಿ ಬಾಳ್ಳುಪೇಟೆ ಗ್ರಾಮದಲ್ಲಿ ಆಂಬುಲೆನ್ಸ್ ತಡೆದು ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟಿಸಿ, ಕೂಡಲೇ ಆನೆ ಸೆರೆ ಹಿಡಿಯಬೇಕು.
 ಮೃತ ವ್ಯಕ್ತಿಯ ಕುಟುಂಬಕ್ಕೆ ಸರ್ಕಾರಿ ನೌಕರಿ ನೀಡ ಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 75 ನ್ನು ಬಂದ್ ಮಾಡಿ ಪ್ರತಿಭಟಿಸಿದರು. ಇದರಿಂದಾಗಿ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಆಗಮಿಸಿದ ಉಪವಿಭಾಗಾಧಿಕಾರಿ ಶರತ್ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.  ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ದಿನೇಶ್, ಬಾಳ್ಳುಗೋಪಾಲ್, ಯಡೆಹಳ್ಳಿ ಬಸವಣ್ಣ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ
ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕು ಹಬ್ಬನಘಟ್ಟ ಮತ್ತು ಮಾಡಾಳು ಗ್ರಾಮ ಪಂಚಾಯ್ತಿ  ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ 5,500 ರು. ಗೌರವ ಧನದ ಆಧಾರದ ಮೇಲೆ ನೇಮಿಸಲು ಹಬ್ಬನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಪ್ರವರ್ಗ-1 ಹಾಗೂ  ಮಾಡಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಸಾಮಾನ್ಯ (ಸಾಮಾನ್ಯ ಮೀಸಲಾತಿ) ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸ ಬಹುದು. ಅಭ್ಯರ್ಥಿ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ವಯೋವುತಿ ಸಾಮಾನ್ಯ ಅಭ್ಯರ್ಥಿಗಳಿಗೆ 18 ರಿಂದ 35 ಹಾಗೂ ಪ್ರವರ್ಗ-1 ವರ್ಗದವರಿಗೆ 18 ರಿಂದ 40 ವರ್ಷ ವಯೋವುತಿ ಇದೆ, ಎಸ್ಸೆಸ್ಸೆಲ್ಸಿ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು, ಗ್ರಂಥಾಲಯ ತರಬೇತಿ ಹೊಂದಿದವರಿಗೆ, ಮುಂದುವರಿಕಾ ಕಲಿಕಾ ಕೇಂದ್ರಗಳಲ್ಲಿ ಪ್ರೇರಕ ಉಪಪ್ರೇರಕರಾಗಿ ಕೆಲಸ ನಿರ್ವಹಿಸುವವರಿಗೆ ಆದ್ಯತೆ ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ನ. 22  ರೊಳಗೆ ಸಂಬಂಧಿಸಿದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ಸಂಬಂಧಿಸಿದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಅಥವಾ ಹಾಸನದ ಮುಖ್ಯ ಗ್ರಂಥಾಲಯಾಧಿಕಾರಿ ಕಚೇರಿ ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement