ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕನಕ ಜಯಂತಿ: ಜಿಲ್ಲಾಡಳಿತ ಪೂರ್ವ ಸಿದ್ಧತೆ

Srinivasa Murthy VN
Updated On : 19 Nov 2013, 1:47 am

ಹಾಸನ: ನಗರದಲ್ಲಿ ನ.20 ರಂದು ಹಾಸನಾಂಬ ಕಲಾ ಕ್ಷೇತ್ರದಲ್ಲಿ ನಡೆಯುವ ಕನಕ ದಾಸರ ಜಯಂತಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಮೂಡಿಬರಲು ಅಧಿಕಾರಿಗಳು ತಮ್ಮ ತಮ್ಮ ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ತಾಕೀತು ಮಾಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ  ನಡೆದ ಜಿಲ್ಲೆಯಲ್ಲಿ ನಡೆಯುವ ಕನಕದಾಸರ ಜಯಂತಿ ಕಾರ್ಯಕ್ರಮದ ಪೂರ್ವ ಸಿದ್ಧತೆ  ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೆರವಣಿಗೆಗೆ ಬೇಕಾದ ಜೀಪ್ ಒದಗಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಯವರಿಗೆ ತಿಳಿಸಿದರು. ಮೆರವಣಿಗೆ ಸಾಗುವ ಮಾರ್ಗವನ್ನು ಸ್ವಚ್ಛಗೊಳಿಸುವುದರ ಜೊತೆಗೆ ತಳಿರು ತೋರಣ ಹಾಕಲು ಕ್ರಮ ವಹಿಸುವಂತೆ ನಗರ ಸಭೆ ಆಯುಕ್ತರಿಗೆ ತಿಳಿಸಿದರು. ಮೆರವಣಿಗೆಯಲ್ಲಿ ನಾನಾ  ಕಲಾ ತಂಡಗಳು ಭಾಗವಹಿಸಲು ಕ್ರಮ ವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು. ಕನಕದಾಸರ ಜಯಂತಿ ಅಂಗವಾಗಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸುವಂತೆ ನಿರ್ದೇಶಿಸಿದರು. ಪೂರ್ಣಕುಂಭ ಸ್ವಾಗತಕ್ಕೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ಸ್ವ ಸಹಾಯ ಸಂಘದ ಸದಸ್ಯರಿಂದ ಏರ್ಪಡಿಸಲು ಕ್ರಮ ವಹಿಸುವಂತೆ ತಿಳಿಸಿದರು. ಸರ್ಕಾರಿ ನೌಕರರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ  ಭಾಗವಹಿಸುವಂತೆ ಜಿಲ್ಲಾಧಿಕಾರಿ ತಾಕೀತು ಮಾಡಿದರು. ಹೆಚ್ಚುವರಿ ಪೊಲೀಸ್ ಅಧಿಕಾರಿ ರಶ್ಮಿ, ಉಪ ವಿಭಾಗಾಧಿಕಾರಿಗಳಾದ ಶ್ರೀವಿದ್ಯಾ, ಬಿ.ಶರತ್, ಪ್ರೊಬೆಷನರಿ ಐಎಎಸ್ ಅಧಿಕಾರಿ ರಾಮಚಂದ್ರ  ಮತ್ತಿತರರು ಉಪಸ್ಥಿತರಿದ್ದರು.

ಲಯನ್ಸ್ ಸಂಸ್ಥೆಯಿಂದ ಮಕ್ಕಳ ದಿನಾಚರಣೆ
ಹೊಳೆನರಸೀಪುರ:
ಸ್ವಾಸ್ಥ್ಯ ಮತ್ತು ಆರೋಗ್ಯವಂತ ಸಮಾಜದ ನಿರ್ಮಾಣ ಕಾರ್ಯಗಳಿಗೆ ಲಯನ್ಸ್ ಸಂಸ್ಥೆಯು ಸದಾ ಸಹಾಯ ಹಸ್ತ ಚಾಚುತ್ತದೆ ಎಂದು ಇಲ್ಲಿನ ಲಯನ್ಸ್ ಸಂಸ್ಥೆ  ಅಧ್ಯಕ್ಷ ಎಚ್.ಆರ್.ಮುಕುಂದೇಗೌಡ ಭರವಸೆ ನೀಡಿದರು.  ಮಕ್ಕಳ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಪಟ್ಟಣದ ಆಶ್ರಯ ಬಡಾವಣೆಯಲ್ಲಿನ ಅಂಗನವಾಡಿ ಕೇಂದ್ರದಲ್ಲಿನ ಮಕ್ಕಳಿಗೆ ಉಚಿತ ಉಡುಪು ವಿತರಿಸಿ, ಸಿಹಿ ಹಂಚಿ ಮಾತನಾಡಿದರು.  ಮುಂದಿನ ದಿನಗಳಲ್ಲಿ ಲಯನ್ಸ್ ಸಂಸ್ಥೆ ವತಿಯಿಂದ ಎಲ್ಲರಿಗೂ ಆರೋಗ್ಯ ಮತ್ತು ಎಲ್ಲೆಡೆಯೂ ಆರೋಗ್ಯ ಎಂಬ ದೃಷ್ಟಿಯಿಂದ ಸಂಸ್ಥೆಯ ಎಲ್ಲ ಪದಾಧಿಕಾರಿಗಳ ಒತ್ತಾಸೆಯಂತೆ ಕಣ್ಣು ಮತ್ತು ಹಲ್ಲಿನ ಕುರಿತಂತೆ ಉಚಿತ ಆರೋಗ್ಯ ಶಿಬಿರ  ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ನೇತ್ರ ತಜ್ಞ ಡಾ.ಕೆ.ಶ್ರೀನಿವಾಸಮೂರ್ತಿ, ಖಜಾಂಚಿ ಎಂ.ಎನ್.ಜೈಪ್ರಕಾಶ್,  ಎಚ್.ಎಸ್.ಕಾಂತರಾಜ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement