ಸಡಗರ, ಸಂಭ್ರಮದ ಕಬ್ಬಳಿ ಬಸವೇಶ್ವರ ಜಾತ್ರೆ
ಚನರಾಯಪಟ್ಟಣ: ಸುಕ್ಷೇತ್ರ ಕಬ್ಬಳಿ ಬಸವೇಶ್ವರ ಜಾತ್ರೆ ಪ್ರಯುಕ್ತ ಸೋಮವಾರ ರಾತ್ರಿ ಹಲವು ಉತ್ಸವಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಿಂದ ಜರುಗಿತು.
ಸೋಮವಾರ ಸಂಜೆ ಬಸವೇಶ್ವರ ಸ್ವಾಮಿ ಹಾಗೂ ಚೌಡೇಶ್ವರಿ ಅಮ್ಮನವರನು ಅಲಂಕೃತ ಎತ್ತಿನಗಾಡಿಯಲ್ಲಿ ಕುಳ್ಳಿರಿಸಿ ಬಸವೇಶ್ವರ ದೇವಸ್ಥಾನದ ಸುತ್ತ ಭಕ್ತರು ಪ್ರದಕ್ಷಿಣೆ ನಡೆಸಿದರು.
ಬಸವೇಶ್ವರ ಸ್ವಾಮಿ ಉತ್ಸವ ನಂತರ ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಅವರನು ಮುತ್ತಿನ ಪಲ್ಲಕ್ಕಿಯಲ್ಲಿ ದೇವಸ್ಥಾನದ ಸುತ್ತ ಮೂರು ಸುತ್ತು ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಹಾಗೂ ವಾದ್ಯಗೋಷ್ಠಿಯೊಂದಿಗೆ ಪ್ರದಕ್ಷಿಣೆ ಮಾಡಿಸಿದರು.
ಮುತ್ತಿನ ಪಲ್ಲಕ್ಕಿ ಉತ್ಸವ ನಂತರ ದೇವಸ್ಥಾನ ಪಕ್ಕದಲ್ಲಿರುವ ಕಲ್ಯಾಣಿಯಲ್ಲಿ ಬಸವೇಶ್ವರ ಸ್ವಾಮಿ ಹಾಗೂ ದಸರೀಘಟ್ಟದ ಚೌಡೇಶ್ವರಿ ಅಮ್ಮನವರನು ತೆಪ್ಪದಲ್ಲಿ ಅಲಂಕರಿಸಿ ಕಲ್ಯಾಣಿಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಮಾರ್ಗದರ್ಶನದಲ್ಲಿ ಮೆರವಣಿಗೆ ನಡೆಸಲಾಯಿತು.
ಜಾತ್ರಾ ಪ್ರಯುಕ್ತ ಸುತ್ತಮುತ್ತಲಿನ ಜನತೆ ತಮ್ಮ ಜಾನುವಾರುಗಳ ಜತೆಯಲ್ಲಿ ಕ್ಷೇತ್ರಕ್ಕೆ ಆಗಮಿಸಿ ತಮ್ಮ ಹರಕೆ ಹಾಗೂ ಪೂಜೆ ಸಲ್ಲಿಸಿದರು. ಜಾತ್ರಾ ಕಾರ್ಯಕ್ರಮದ ಯಶಸ್ವಿಗೆ ಕಾರಣರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಮಾಜಿ ಸಚಿವ ಎಚ್.ಸಿ ಶ್ರೀಕಂಠಯ್ಯ ಕುಟುಂಬದವರಿಂದ ಪುಷ್ಪವೃಷ್ಟಿ ನಡೆಸಲಾಯಿತು.
ಧಾರ್ಮಿಕ ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚಿಸಿ ಕಬ್ಬಳಿ ಕ್ಷೇತ್ರ ಪಂಚಲಿಂಗಗಳ ಕ್ಷೇತ್ರವಾಗಿದ್ದು, ಕ್ಷೇತ್ರದಲ್ಲಿ ಬೃಹದಾಕಾರದಲ್ಲಿ ದೇವಸ್ಥಾನ ನಿರ್ಮಿಸುವ ಉದ್ದೇಶ ಹೊಂದಲಾಗಿದ್ದು, ಇದಕ್ಕಾಗಿ ನೀಲ ನಕ್ಷೆ ತಯಾರಾಗುತ್ತಿದೆ ಎಂದು ತಿಳಿಸಿದರು.
ಕಬ್ಬಳಿ ಬಸವೇಶ್ವರ ಸ್ವಾಮಿಯ ದೇವಾಲಯ ಆವರಣದಲ್ಲಿ ಆದಿಚುಂಚನಗಿರಿಮಠದ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ದೇವಾಲಯದಲ್ಲಿ ಗ್ರಾಮದ ಸುತ್ತ ಮುತ್ತವಿರುವ ಪಂಚಲಿಂಗ ದೇವರುಗಳನು ಒಂದೇ ದೇವಾಲಯದಲ್ಲಿ ಸ್ಥಾಪನೆ ಮಾಡುವ ಉದ್ದೇಶಕ್ಕೆ ಗ್ರಾಮಸ್ಥರು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.
ಆಧುನಿಕವಾಗಿ ತಾವು ಎಲ್ಲಾ ಕ್ಷೇತ್ರದಲ್ಲಿ ಮುಂದುವರಿದಿರಬಹುದು. ಆದರೆ ಹಿರಿಯರು ರೂಢಿಸಿಕೊಂಡು ಬರುತ್ತಿರುವ ಪರಂಪರೆಯಲ್ಲಿ ಒಂದಲ್ಲಾ ಒಂದು ಸತ್ಯ ಹುದುಗಿದ್ದು, ಅದನು ನಾವು ಮುಂದಿನ ಪೀಳಿಗೆಗೆ ಕೊಂಡೊಯ್ಯುವುದು ತಮ್ಮ ಕರ್ತವ್ಯವಾಗಿದೆ ಎಂದು ಸ್ವಾಮೀಜಿ ನುಡಿದರು.
ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ ಕಬ್ಬಳ್ಳಿ ಕ್ಷೇತ್ರ ಧಾರ್ಮಿಕ ಕ್ಷೇತ್ರವಾಗಿ ಬೆಳೆಯುತ್ತಿದ್ದು, ಕ್ಷೇತ್ರಕ್ಕೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸುವ ಭಕ್ತರಿಗೆ ರಸ್ತೆ ಹಾಗೂ ಮೂಲಭೂತ ಸೌಲಭ್ಯಗಳನು ಒದಗಿಸಲು ತಮ್ಮ ಅನುದಾನ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.
ಆದಿಚುಂಚನಗಿರಿ ಮಠ ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದು, ವೈದ್ಯಕೀಯ ಹಾಗೂ ಇಂಜನಿಯರಿಂಗ್ ಕೋರ್ಸ್ಗಳಲ್ಲಿ ಬಡವರಿಗೆ ವಸತಿ ಸೌಲಭ್ಯ ನೀಡುವ ಜತೆಗೆ ಬಡ ವಿದ್ಯಾಥಿಗಳಿಗೆ ರಿಯಾಯಿತಿ ದರದಲ್ಲಿ ಕೋರ್ಸ್ಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಈ ಸಂದರ್ಭದಲ್ಲಿ ಅವರು ಮನವಿ ಮಾಡಿದರು.
ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ಆದಿಹಳ್ಳಿ ಮಠದ ಶಿವಪುತ್ರನಾಥ ಸ್ವಾಮೀಜಿ, ಶೃಂಗೇರಿ ಶಾಖಾ ಮಠದ ಗುರುನಾಥ ಸ್ವಾಮೀಜಿ, ಜಿಪಂ ಮಾಜಿ ಉಪಾಧ್ಯಕ್ಷ ಎಚ್.ಎಸ್. ಜಯ್ಕುಮಾರ್, ಹಿರೀಸಾವೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಸ್ವಾಮಿ, ತೆಂಗು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕಬ್ಬಳಿ ರಂಗೇಗೌಡ ತಹಸೀಲ್ದಾರ್ ನಾಗರಾಜು, ಸುತ್ತಮುತ್ತಲ ಗ್ರಾಮಸ್ಥರು ಉತ್ಸವದಲ್ಲಿ ಭಾಗಿಯಾಗಿದ್ದರು.