ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ನಿಟ್ಟೂರಲ್ಲಿ ರಸ್ತೆತಡೆ, ಪ್ರತಿಭಟನೆ

Srinivasa Murthy VN
Updated On : 22 Nov 2013, 12:44 pm

ಕ.ಪ್ರ.ವಾರ್ತೆ ಹಾಸನ ನ. 21
ಡಾ.ಅಂಬೇಡ್ಕರ್ ಹಾಗೂ ಬುದ್ಧನ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಮತ್ತು ಸಗಣಿ ಬಳಿದು ಅವಮಾನಗೊಳಿಸಿರುವ ಘಟನೆ ನಿಟ್ಟೂರಿನಲ್ಲಿ ಗುರುವಾರ ನಡೆದಿದೆ. ಇದರಿಂದ ಆಕ್ರೋಶಗೊಂಡು ದಲಿತ ಸಂಘಟನೆ ಹಾಗೂ ಸ್ಥಳೀಯರು ದಿಢೀರ್ ಪ್ರತಿಭಟನೆ ನಡೆಸಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಘಟನೆಯನ್ನು ತೀವ್ರವಾಗಿ ಖಂಡಿಸಿದ ದಲಿತರು ಸಂಘಟನೆ ಹಾಗೂ ಸ್ಥಳೀಯರು ರಸ್ತೆ ತಡೆ ವೇಳೆ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿದರು.ಇದರಿಂದ ಕೆಲ ಸಮಯ ಬಿಗುವಿನ ವಾತಾವರಣ ಉಂಟಾಗಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಿಗುವಿನ ವಾತಾವರಣ ತಿಳಿಗೊಳಿಸಿದರು.
ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಅಂಬೇಡ್ಕರ್ ಹಾಗೂ ಬುದ್ಧನ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಹಾಗೂ ಸಗಣಿ ಕಳೆದ ರಾತ್ರಿ ಬಳಿದಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದು ಹೋದ ನಂತರ ರಾಜ್ಯದಲ್ಲಿ ಜಾತಿ ಜಾತಿಗಳ ನಡುವೆ ಸಂಘರ್ಷಗಳು ಹೆಚ್ಚಾಗಿವೆ. ಮೋದಿ ಪ್ರಚೋದನಕಾರಿ ಹೇಳಿಕೆಗಳಿಂದ ರಾಜ್ಯದಲ್ಲಿ ಜಾತಿ ಜಾತಿಗಳ ನಡುವಿನ ಅಸಮಾನತೆ ಹೆಚ್ಚಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಷ್ಟು ವರ್ಷ ಇಲ್ಲದ ಜಾತಿಗಳ ನಡುವಿನ ಸಂಘರ್ಷ ಇದ್ದಕ್ಕಿಂತೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗುತ್ತಿದೆ. ದೇಶದ ಸಂವಿಧಾನ ರಚಿಸಿದ ಅಂಬೇಡ್ಕರ್ ಹಾಗೂ ಬುದ್ಧನ ಭಾವ ಚಿತ್ರೆಗೆ ಈ ರೀತಿಯ ಸಗಣಿ ಮತ್ತು ಮಸಿ ಬಳೆದಿರುವಂತಹ ಕೃತ್ಯ ಖಂಡನೀಯ. ಈ ಕೃತ್ಯದ ಹಿಂದೆ ಆರ್‌ಎಸ್‌ಎಸ್ ಕೈವಾಡವಿದೆ ಎಂದು ದಲಿತ ಮುಖಂಡರು ಆರೋಪಿಸಿದರು. ಜಾತಿ ಜಾತಿಗಳ ನಡುವೆ ಸಂಘರ್ಷ ಉಂಟು ಮಾಡುವ, ಶಾಂತಿ ಕದಡುವ ಯತ್ನ ಮಾಡುತ್ತಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಭಾವಚಿತ್ರಕ್ಕೆ ಬಳಿದಿದ್ದ ಸಗಣಿ ಮತ್ತು ಮಸಿಯನ್ನು ಸ್ವಚ್ಛಗೊಳಿಸಿದರು. ಸಂಘಟನೆಗಳ ಮುಖಂಡ ಸತೀಶ್, ವೆಂಕಟೇಶ್, ರಾಜು, ಸುರೇಶ್, ನಾಗರಾಜ್ ಹೆತ್ತೂರು, ಸತೀಶ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement