ಕರಕುಶಲ ತರಬೇತಿಗೆ ನೇರ ಸಂದರ್ಶನ
ಹಾಸನ: ಬೆಂಗಳೂರಿನ ಬಿಡದಿ ಬಳಿಯಿರುವ ಕೆನರಾ ಬ್ಯಾಂಕ್ ಪ್ರಾಯೋಜಿತ ಕೆಪಿಜೆ ಪ್ರಭು ಕರಕುಶಲ ತರಬೇತಿ ಸಂಸ್ಥೆಯು ನಿರುದ್ಯೋಗಿ ಯುವಕರಿಗೆ ಮರ ಮತ್ತು ಕಲ್ಲು ಕೆತ್ತನೆ ಹಾಗೂ ಲೋಹ ಶಿಲ್ಪ ವಿಭಾಗಗಳಲ್ಲಿ 18 ತಿಂಗಳು ಮತ್ತು ಕುಂಭ ಕಲೆ (ಟೆರ್ರಾಕೋಟಾ) ಯಲ್ಲಿ 6 ತಿಂಗಳಾವಧಿಯ ಉಚಿತ ತರಬೇತಿ ತರಗತಿಗಳನ್ನು ವ್ಯವಸ್ಥೆ ಗೊಳಿಸಿದೆ.
ಅಭ್ಯರ್ಥಿಗಳು ಕನಿಷ್ಠ 7 ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, ವಯೋವುತಿ 18 ರಿಂದ 35 ವರ್ಷದೊಳಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ, ವಸತಿ, ಸಮವಸ್ತ್ರ, ಉಪಕರಣಗಳು, ಕಚ್ಚಾ ಸಾಮಗ್ರಿಗಳನ್ನು ಒದಗಿಸಲಾಗುವುದು. ಅಭ್ಯರ್ಥಿಗಳಿಗೆ ತರಬೇತಿ ಅಂಗವಾಗಿ ಪ್ರವಾಸ ಏರ್ಪಡಿಸಲಾಗುವುದಲ್ಲದೆ, ನುರಿತ ಶಿಕ್ಷಕರಿಂದ ತರಬೇತಿ ನೀಡಲಾಗುವುದು.
ತರಬೇತಿಗೆ ಸೇರಲಿಚ್ಛಿಸುವವರು ನೇರ ಸಂದರ್ಶನಕ್ಕೆ ನ.26ರಿಂದ 28ರೊಳಗೆ ಬೆಂಗಳೂರು ಸಮೀಪದ ಜೋಗರದೊಡ್ಡಿ (ಬಿಡದಿ ಹೋಬಳಿ, ರಾಮನಗರ ಜಿಲ್ಲೆ) ಯಲ್ಲಿರುವ ಕೆನರಾ ಬ್ಯಾಂಕ್ ಪ್ರಾಯೋಜಿತ ಕೆಪಿಜೆ ಪ್ರಭು ಕರಕುಶಲ ತರಬೇತಿ ಸಂಸ್ಥೆಯಲ್ಲಿ ಹಾಜರಾಗಬೇಕು.
ಆಯ್ಕೆಯಾದ ಅಭ್ಯರ್ಥಿಗಳನ್ನು ಅದೇ ದಿನ ಸ್ಥಳದಲ್ಲೇ ತರಬೇತಿಗೆ ಹಾಜರಿಪಡಿಸಿಕೊಳ್ಳಲಾಗುವುದು. ಸಂಸ್ಥೆಯ ನಿರ್ದೇಶಕ ಎಂ.ವೆಂಕಟೇಶ ಶೇಷಾದ್ರಿರನ್ನು 9900158885 ಸಂಪರ್ಕಿಸಿ.