ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಚ.ರಾ.ಪಟ್ಟಣ ತಾ: ದನಗಳ ಜಾತ್ರೆ ರದ್ದು

Srinivasa Murthy VN
Updated On : 23 Nov 2013, 9:42 am

ಚನ್ನರಾಯಪಟ್ಟಣ: ತಾಲೂಕಿನಲ್ಲಿ ಜಾನುವಾರುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಲುಬಾಯಿ ಜ್ವರವನ್ನು ಹತ್ತಿಕ್ಕುವ ಸಲುವಾಗಿ ತಾಲೂಕಿನಲ್ಲಿ ನಡೆಯುವ ಎಲ್ಲಾ ದನಗಳ ಸಂತೆ ಹಾಗೂ ಜಾತ್ರೆಗಳನ್ನು ರದ್ದುಪಡಿಸಲಾಗಿದೆ ಎಂದು ತಹಸೀಲ್ದಾರ್ ಡಾ. ನಾಗರಾಜು ತಿಳಿಸಿದರು.
ತಾಲೂಕಿನಲ್ಲಿ ಕಾಲುಬಾಯಿ ಜ್ವರದಿಂದ ಜಾನುವಾರುಗಳ ಮರಣ ಸಂಖ್ಯೆ ಏರುತ್ತಿದ್ದು, ಕಾಲುಬಾಯಿ ಜ್ವರ ಸಾಂಕ್ರಾಮಿಕ ರೋಗವಾಗಿರುವ ಹಿನ್ನಲೆಯಲ್ಲಿ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ದನಗಳ ಜಾತ್ರೆ ಹಾಗೂ ದನಗಳ ಸಂತೆಯನ್ನು ರದ್ದುಪಡಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಜಾನುವಾರುಗಳು ಕಾಲುಬಾಯಿ ಜ್ವರದಿಂದ ಮರಣಹೊಂದಿರುವ ಸಂಖ್ಯೆ ತಾಲೂಕಿನಲ್ಲಿ ಹೆಚ್ಚಿದ್ದು, ಇದುವರೆಗೆ 331ರಾಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡಿದ್ದು, 63 ಜಾನುವಾರುಗಳು ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ ಎಂದರು.  ಕಾಲುಬಾಯಿ ಜ್ವರ ಹರಡುವ ಬಗ್ಗೆ ಆಟೋ ಹಾಗೂ ಕರಪತ್ರದಲ್ಲಿ ಜನತೆಗೆ ತಿಳಿಸುವ ಕಾರ್ಯ ಮಾಡುತ್ತಿದ್ದು, ಈ ಬಗ್ಗೆ ತಾಲೂಕಿನ ಎಲ್ಲಾ ಪಶು ವೈದ್ಯಾಧಿಕಾರಿಗಳು ಮುನ್ನೆಚ್ಚರಿಕೆಯಲ್ಲಿ ಕಾರ್ಯ ನಿರ್ವಹಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.
ರೈತರು ಸಂತೆ ಮತ್ತು ಇತರೆ ಜಿಲ್ಲೆಗಳಲ್ಲಿ ಕಡಿಮೆ ಬೆಲೆಗೆ ಜಾನುವಾರುಗಳು ಸಿಗುತ್ತವೆ ಎಂದು ತಿಳಿದು ಖರೀದಿಸಲು ಮುಂದಾಗಬಾರದು. ಹಾಗೂ ತಮ್ಮ ಜಾನುವಾರುಗಳಿಗೆ ಸಣ್ಣದಾಗಿ ಜ್ವರ ಅಥವಾ ಕಾಲಿನಲ್ಲಿ ಗಾಯದ ಸೂಚನೆಗಳು ಕಂಡು ಬಂದರೆ ಹತ್ತಿರದ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಲು ಕೋರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement